top of page


"ಭಾರತದ ಜಲ ಬಾಂಬ್ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!
ಪಾಕಿಸ್ತಾನಕ್ಕೆ ಹಕ್ಕಿನಂತೆ ದೊರೆಯಬೇಕಾದ ನೀರನ್ನು ತಡೆಯಲು ಅಥವಾ ಬೇರೆಡೆಗೆ ತಿರುಗಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ನಮ್ಮ ಪಾಲಿನ ನೀರಿನ ಮೇಲೆ ಯಾರಾದರೂ ಹಕ್ಕು ಸಾಧಿಸಲು ಯತ್ನಿಸಿದರೆ, ನಾವು ಸುಮ್ಮನಿರುವುದಿಲ್ಲ. ನವದೆಹಲಿ/ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದ (Indus Waters Treaty) ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್ ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. "ಪಾಕಿಸ್ತಾನಕ್ಕೆ ಸೇರಬೇಕಾದ ನೀರನ್ನು ಕಸಿದುಕೊಳ್ಳಲು ಯಾರೇ ಪ್ರಯತ್ನಿಸಿದರೂ ಅವರ ಕೈ ಕತ್ತರಿ
new waves technology
Jun 302 min read


'ಜನರ ತೆರಿಗೆ ದುಡ್ಡಲ್ಲಿ ಪ್ರಧಾನಿ ಮೋದಿ ಫಾರಿನ್ ಟ್ರಿಪ್ ಮಾಡ್ತಾರೆ, ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೊಳ್ತಾರೆ': ವಿರೋಧ ಪಕ್ಷಗಳ ಟೀಕೆ
ಪ್ರಧಾನ ಮಂತ್ರಿ ಮೋದಿಗೆ ಪ್ರಶಸ್ತಿಗಳು ತುಂಬಾ ಇಷ್ಟ. ವಿದೇಶ ಪ್ರವಾಸಗಳೂ ಅಷ್ಟೇ ಇಷ್ಟ. ಅವರು ನಮ್ಮ ತೆರಿಗೆದಾರರ ಹಣದಿಂದ ಸೆಶೆಲ್ಸ್ ದೇಶಕ್ಕೆ 500 ಕೋಟಿ ರೂಪಾಯಿ ಅನುದಾನ ಮತ್ತು 1,250 ಕೋಟಿ ರೂಪಾಯಿ ಸಾಲದ ನೆರವು ನೀಡಿ ಪ್ರಶಸ್ತಿ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಶೆಲ್ಸ್ ದೇಶವು ಪ್ರದಾನ ಮಾಡಿದ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವದ ಕುರಿತು ವಿರೋಧ ಪಕ್ಷದ ನಾಯಕರು ಭಾರೀ ಟೀಕೆ ಮಾಡುತ್ತಿದ್ದಾರೆ. ಪ್ರಶಸ್ತಿಯ ಪ್ರಮಾಣಪತ್ರದಲ್ಲಿರುವ ಕಾಗುಣಿತದ ದೋಷಗಳನ್ನು ಉಲ್ಲೇಖಿಸಿ ಅದರ ವಿಶ್ವಾಸಾರ್ಹತೆಯನ್ನೂ ಪ್ರಶ್ನಿಸಿದ್ದಾರೆ.
new waves technology
Jun 302 min read


ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ, ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!
ಪ್ರಧಾನಿ ಮೋದಿ ಅವರನ್ನು ಮತ್ತೆ ಅಮೆರಿಕದಲ್ಲಿ ಸ್ವಾಗತಿಸಲು ನಾವು ಕಾತರರಾಗಿದ್ದೇವೆ. ಅವರು ಡಿಸೆಂಬರ್ನಲ್ಲಿ ಜಿ20 ಶೃಂಗಸಭೆಗಾಗಿ ಅಮೆರಿಕಕ್ಕೆ ಬರಲಿದ್ದಾರೆ ಎಂಬುದು ನಮಗೆ ತಿಳಿದಿದೆ. ನವದೆಹಲಿ/ವಾಷಿಂಗ್ಟನ್: ಭಾರತದೊಂದಿಗೆ ಅಮೆರಿಕದ ಸಂಬಂಧ ಮತ್ತಷ್ಟು ಬಲಗೊಳ್ಳುತ್ತಿರುವ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೆ ಅಮೆರಿಕಕ್ಕೆ ಭೇಟಿ ನೀಡುವಂತೆ ಅಧಿಕೃತ ಆಹ್ವಾನ ನೀಡಲಾಗಿದೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ (Sergio Gor) ತಿಳಿಸಿದ್ದಾರೆ. ಇದೇ ವೇಳೆ, ಭಾರತ-ಅಮೆರಿಕ ನಡುವಿನ ಮಹತ್ವದ ವ್ಯಾಪಾರ ಒಪ್ಪಂದ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಪೂ
new waves technology
Jun 302 min read


ಸೆಶೆಲ್ಸ್ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ
ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿವೆ. ನವದೆಹಲಿ: ಭಾರತದ ದೃಷ್ಟಿಯಲ್ಲಿ ಹಿಂದೂ ಮಹಾಸಾಗರವು ಅವಕಾಶಗಳ ಸಾಗರವಾಗಿದ್ದು, ಸಾಗರ ಭದ್ರತೆ ಮತ್ತು ಆರ್ಥಿಕ ಸಮೃದ್ಧಿ ಪರಸ್ಪರ ಪೂರಕವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು. ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್
new waves technology
Jun 292 min read


IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಭಾರತದ ಮಾಜಿ ಆಲ್ರೌಂಡರ್ ನೇಮಕ?
ಡೆಲ್ಲಿ ಕ್ಯಾಪಿಟಲ್ಸ್ (DC) ಸಂಪೂರ್ಣ ಪರಿಷ್ಕರಣೆಗೆ ಸಜ್ಜಾಗಿದ್ದು, ಜೆಎಸ್ಡಬ್ಲ್ಯು ಮುಂಬರುವ 2027-28ರ ಆವೃತ್ತಿಗಳಿಗೆ ಫ್ರಾಂಚೈಸಿ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತದೆ. ನವದೆಹಲಿ: ಮಾಜಿ ವೈಟ್-ಬಾಲ್ ದಿಗ್ಗಜ ಯುವರಾಜ್ ಸಿಂಗ್ 2027ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಬ್ಯಾಟಿಂಗ್ ಕೋಚ್ ಆಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಐಪಿಎಲ್ ಮೂಲಗಳು ಶುಕ್ರವಾರ ತಿಳಿಸಿವೆ. 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ಎರಡರಲ್ಲೂ ಭಾರತದ ಪಂದ್ಯಾವಳಿಯ ಶ್ರೇಷ್ಠ ಆಟಗಾರ ಯುವರಾಜ್, ಇತ್ತೀಚಿನ ವರ್ಷಗಳಲ್ಲಿ ಸದ್ಯ ಭಾರತ ತಂಡದ ನಾಯಕ ಶುಭಮನ್ ಗಿಲ್ ಮತ್ತು ವ
new waves technology
Jun 191 min read


ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು
ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ನವದೆಹಲಿ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ. ಖರ್ಗೆ ಅವರ ಹೇಳಿಕೆಗಳು ಸದನದ ಘನತೆ ಮತ್ತು ಸಂಸದೀಯ ಸಂಪ್ರದಾಯಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಸಂಸದರು ಆರೋಪಿಸಿದ್ದಾರೆ. ರಾಜ್ಯಸಭೆಯ ಅಧ್ಯಕ್ಷರು ಈ ವಿ
new waves technology
Jun 181 min read


ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಬೆನ್ನಲ್ಲೇ ಸುರಕ್ಷಿತವಾಗಿ ಹಾರ್ಮುಜ್ ದಾಟಿದ ಭಾರತದ ಮೊದಲ LNG ನೌಕೆ ದಿಶಾ!
ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಾಮಾನ್ಯವಾಗಿದೆ ಮತ್ತು ಯಾವುದೇ ದಟ್ಟಣೆ ವರದಿಯಾಗಿಲ್ಲ ಎಂದು ಅಧಿಕಾರಿ ಹೇಳಿದರು. ನವದೆಹಲಿ: ಭಾರತೀಯ ಅನಿಲ ಸಾಗಿಸುವ ಹಡಗು ದಿಶಾ ಸಂಘರ್ಷ ಪೀಡಿತ ಮಧ್ಯಪ್ರಾಚ್ಯ ಪ್ರದೇಶದಿಂದ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ್ದು, ಭಾರತದತ್ತ ಹೊರಟಿದೆ. ಕಳೆದ ಮೂರು ತಿಂಗಳಿನಲ್ಲಿ ಭಾರತದ ಎಲ್ಎನ್ಜಿ ಹಡಗಿನ ಮೊದಲ ಯಶಸ್ವಿ ಪ್ರಯಾಣ ಇದಾಗಿದೆ. ಭಾರತದ ಶಿಪ್ಪಿಂಗ್ ಕಾರ್ಪೊರೇಷನ್ ನೇತೃತ್ವದ ಒಕ್ಕೂಟದಿಂದ ನಿರ್ವಹಿಸಲ್ಪಡುವ ದಿಶಾ, 62,370 ಮೆಟ್ರಿಕ್ ಟನ್ ಎಲ್ಎನ್ಜಿ ಸರಕುಗಳನ್ನು ಸಾಗಿಸುತ್ತಿದೆ ಎಂದು ಹಡಗು ಸಚಿವಾಲಯದ ಅಧಿಕಾರಿಯೊಬ್ಬರು ಸೋಮವಾರ ತಿಳಿಸ
new waves technology
Jun 151 min read


NEET, CBSE ಅಕ್ರಮಕ್ಕೆ ಆಕ್ರೋಶ: ಜೂನ್ 13ರ ಒಳಗೆ ಪ್ರಧಾನ್ ಕೆಳಗಿಳಿಯದಿದ್ದರೆ ಪ್ರತೀ ರಾಜ್ಯದಲ್ಲೂ ಪ್ರತಿಭಟನೆ- Cockroach Janata Party ಎಚ್ಚರಿಕೆ
ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳ ಹೊಣೆ ಹೊತ್ತು ಪ್ರಧಾನ್ ಅವರು ಸ್ಥಾನ ತ್ಯಜಿಸಬೇಕು. ಜೂನ್ 13ರೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜೂನ್ 13, 2026ರ ಒಳಗೆ ರಾಜೀನಾಮೆ ನೀಡದಿದ್ದರೆ ದೇಶದ ವಿವಿಧ ರಾಜ್ಯಗಳು ಮತ್ತು ನಗರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವೀಡಿಯೋ ಸಂದೇಶದ ಮೂಲಕ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್
new waves technology
Jun 81 min read


ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಲ್ಲಿಸಿದ ಪಟ್ಟಿಯಲ್ಲಿರುವ 12 ಮಂದಿಯಲ್ಲಿ 10 ಮಂದಿಯನ್ನು ಹಾಗೂ ಶಿವಕುಮಾರ್ ಸಲ್ಲಿಸಿದ 15 ಮಂದಿಯ ಪಟ್ಟಿಯಿಂದ 12 ಮಂದಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ 10 ರಿಂದ 12 ಮಂದಿ ಶಾಸಕರ ಅಂತಿಮ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆಯಿದ್ದು, ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕ
new waves technology
Jun 22 min read


ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು
2000 ರ ಸೆಕ್ಷನ್ 69A ಅಡಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ಸ್ಥಗಿತಗೊಳಿಸಲು X ಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ ವಿರೋಧವಾಗಿ ಕಳೆದ ವಾರ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಭಾರತದಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ತಡೆಹಿಡಿಯಲಾಗಿತ್ತು. ಇದಕ್ಕೆ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಕೇಂದ್ರ ಸರ್ಕಾರ ಆರೋಪಿಸಿದ ನಂತರ ಎಕ್ಸ್ ಖಾತೆಯನ್ನು ಗುರುವಾರ ಸ್ಥಗಿ
new waves technology
May 222 min read


ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ ಯುದ್ಧ ಸೇರಿದಂತೆ ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್ ಜೊತೆ ಪ್ರಧಾನಿ ಮೋದಿ ಚರ್ಚೆ!
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ... ನವದೆಹಲಿ: ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಚರ್ಚಿಸಿದರು. ಮಾತುಕತೆ ಮತ್ತು ರಾಜತಾಂತ
new waves technology
May 151 min read


ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?
ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ನವದೆಹಲಿ: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿ ಕಳೆದ ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಬಿಗ್ ಶಾಕ್ ನೀಡಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ
new waves technology
May 111 min read


KD Movie 'ಸರ್ಸೆ ನಿನ್ನ ಸೆರಗ ಸರ್ಸೆ' ವಿವಾದ: ಕ್ಷಮೆಯಾಚಿಸಿದ ಸಂಜಯ್ ದತ್; 50 ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ; Video
ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. ನವದೆಹಲಿ: ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ 'ಕೆಡಿ' ಸಿನಿಮಾದ ಹಾಡು 'ಸರ್ಸೆ ನಿನ್ನ ಸೆರಗ ಸರ್ಸೆ'ಯ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ಕೇಂದ್ರ ಸರ್ಕಾರ ಹಿಂದಿ ಆವೃತ್ತಿ 'ಸರ್ಕೆ ಚುನರ್ ತೇರಿ ಸರ್ಕೆ'ಯನ್ನು ಬ್ಯಾನ್ ಮಾಡಿದೆ. ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ
new waves technology
Apr 281 min read


ಶಬರಿಮಲೆ ಚಿನ್ನ ಕಳವು ಪ್ರಕರಣ:ಕೇರಳ,ಕರ್ನಾಟಕ, ತ.ನಾಡಿನ 21 ಸ್ಥಳಗಳಲ್ಲಿ ED ದಾಳಿ
ಕೊಚ್ಚಿ/ನವದೆಹಲಿ: ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳ 21 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಇ.ಡಿ ದಾಳಿ ನಡೆಸಿದೆ. ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರ ಬೆಂಗಳೂರಿನಲ್ಲಿರುವ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಕೇ
new waves technology
Jan 201 min read

