ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸ್ಥಳೀಯ ಅಧಿಕಾರಿಗಳು ಅನುಮತಿ ನೀಡಬಾರದು: ಈಶ್ವರ್ ಖಂಡ್ರೆ ಖಡಕ್ ಸೂಚನೆ!
- new waves technology
- Jan 24
- 1 min read
ಈ ವಾರದ ಆರಂಭದಲ್ಲಿ ಹಾಸನ ಜಿಲ್ಲೆಯ ಯಸಳೂರು ಪ್ರದೇಶದ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂತಾರ ಅಧ್ಯಾಯ 1 ಚಿತ್ರೀಕರಣದ ಸಮಯದಲ್ಲಿ ಚಿತ್ರತಂಡ ಹೇಗೆ ನಿಯಮಗಳನ್ನು ಉಲ್ಲಂಘಿಸಿ, ವನ್ಯಜೀವಿ ಅಥವಾ ಸಸ್ಯ ಮತ್ತು ಪ್ರಾಣಿಗಳಿಗೆ ಹಾನಿಯನ್ನುಂಟುಮಾಡಿದೆ ಎಂಬುದರ ಅನೇಕ ವರದಿ

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ರೀತಿಯ ಚಿತ್ರೀಕರಣಕ್ಕೆ ಸೂಕ್ತ ಅಧಿಕಾರಿಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಸ್ತುತ ಸ್ಥಳೀಯ ಮಟ್ಟದ ಅಧಿಕಾರಿಗಳು ಸಹ ಪರವಾನಗಿಗಳನ್ನು ನೀಡುತ್ತಿರುವುದನ್ನು ಅವರು ತಿಳಿಸಿದ್ದಾರೆ.
ಜನವರಿ 20 ರಂದು ಇಲಾಖೆ ಅಪರ ಕಾರ್ಯದರ್ಶಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆ ಮುಖ್ಯಸ್ಥರಿಗೆ ನಿರ್ದೇಶನ ನೀಡಿರುವ ಸಚಿವರು, ಪ್ರಸ್ತುತ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮಾತ್ರ ಅಧಿಕಾರವಿದೆ. ಆದರೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅರಣ್ಯ ಪ್ರದೇಶಗಳಲ್ಲಿ ವಿವಿಧ ರೀತಿಯ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಾರೆ. ಇದರಿಂದಾಗಿ ಅರಣ್ಯ ಪ್ರದೇಶದ ರಹಸ್ಯ ಮಾಹಿತಿಯು ಹೊರಜಗತ್ತಿಗೆ ಲಭ್ಯವಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ ಸೂಕ್ಷ್ಮತೆಯ ಅರಿವಿನ ಕೊರತೆಯಿಂದ ಅರಣ್ಯ ಮತ್ತು ವನ್ಯಜೀವಿಗಳು, ಪರಿಸರ ಮತ್ತು ಜೀವವೈವಿಧ್ಯಕ್ಕೆ ಹಾನಿಯಾಗುವ ಸಾಧ್ಯತೆಯೂ ಇದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅರಣ್ಯ ಪ್ರದೇಶಗಳಲ್ಲಿ ಚಿತ್ರೀಕರಣದಿಂದ ಉಂಟಾಗುವ ಸಂಭಾವ್ಯ ಸಮಸ್ಯೆಗಳು ಮತ್ತು ಅದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆಯ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದರು. ಈ ವಾರದ ಆರಂಭದಲ್ಲಿ ಹಾಸನ ಜಿಲ್ಲೆಯ ಯಸಳೂರು ಪ್ರದೇಶದ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂತಾರ ಅಧ್ಯಾಯ 1 ಚಿತ್ರೀಕರಣದ ಸಮಯದಲ್ಲಿ ಚಿತ್ರತಂಡ ಹೇಗೆ ನಿಯಮಗಳನ್ನು ಉಲ್ಲಂಘಿಸಿ, ವನ್ಯಜೀವಿ ಅಥವಾ ಸಸ್ಯ ಮತ್ತು ಪ್ರಾಣಿಗಳಿಗೆ ಹಾನಿಯನ್ನುಂಟುಮಾಡಿದೆ ಎಂಬುದರ ಅನೇಕ ವರದಿಗಳನ್ನು ವಿವರಿಸಿದ್ದಾರೆ.
ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವ ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರವನ್ನು ಖಾತ್ರಿಪಡಿಸುವ ಹಿತದೃಷ್ಟಿಯಿಂದ ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ರೀತಿಯ ಚಿತ್ರೀಕರಣಕ್ಕೆ ಸರ್ಕಾರದ ಸೂಕ್ತ ಅನುಮತಿಯನ್ನು ಕಡ್ಡಾಯವಾಗಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಖಂಡ್ರೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Commentaires