top of page

ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!

  • Writer: new waves technology
    new waves technology
  • Apr 23
  • 1 min read
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ನಿಗದಿತ ವೇಳಾಪಟ್ಟಿಗಿಂತ ಒಂದು ದಿನ ಮೊದಲೇ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಅದರಂತೆ ಇಂದು ಮಧ್ಯಾಹ್ನ (ಗುರುವಾರ) 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ನ್ಯಾಯಾಲಯ ಆದೇಶ ಮತ್ತು ಇಲಾಖೆಯ ನಿರ್ಧಾರದ ಕುರಿತು ಬುಧವಾರ ಸಂಜೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಇ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯ ತೀರ್ಮಾನ ಪಾಲನೆಗೆ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಗ್ರೇಡ್ ನೀಡುವುದಾಗಿ ಹೇಳಿದ್ದರಿಂದ ಹೆಚ್ಚಿನ ಮಕ್ಕಳು ಪರೀಕ್ಷೆ ಬರೆಯುವ ವೇಳೆ ತೃತೀಯ ಭಾಷೆಗೆ ಹೆಚ್ಚು ಗಮನ ನೀಡಿರಲಿಲ್ಲ. ಅಂಕಗಳಿಗೆ ಆದ್ಯತೆ ಇಲ್ಲದ ಕಾರಣ ಹಲವು ವಿದ್ಯಾರ್ಥಿಗಳು ನೆಪ ಮಾತ್ರಕ್ಕೆ ಪರೀಕ್ಷೆ ಬರೆದಿದ್ದರು. ಈಗ ಅಂತಹವರಿಗೆ ಕಟ್ಟನಿಟ್ಟಾಗಿ ಮೌಲ್ಯಮಾಪನ ಮಾಡಿ ಅಂಕ ನೀಡಿದರೆ ಅವರ ಭವಿಷ್ಯಕ್ಕೆ ಕುತ್ತು ಉಂಟಾಗಬಹುದು. ಹೀಗಾಗಿ ಕೃಪಾಂಕ ನೀಡಿರುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕೃಪಾಂಕ ನೀಡುವ ವಿಚಾರವನ್ನು ಗುರುವಾರ ಮಧ್ಯಾಹ್ನವೇ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗುತ್ತದೆ. ಸದ್ಯಕ್ಕೆ ಯಾವುದೇ ವಿಷಯವನ್ನೂ ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಫಲಿತಾಂಶದ ಬಳಿಕವೇ ಉತ್ತರ ಸಿಗಲಿದೆ ಎಂದು ತಿಳಿಸಿದರು.

ಈ ಬಾರಿ SSLC ಪರೀಕ್ಷೆ-1ಕ್ಕೆ ರಾಜ್ಯದ 15,941 ಶಾಲೆಗಳಿಂದ ಒಟ್ಟು 8,65,988 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ವರ್ಷ ಪ್ರತಿಯೊಂದು ವಿಷಯದ ಉತ್ತೀರ್ಣ ಅಂಕವನ್ನು 35ರಿಂದ 30ಕ್ಕೆ ಇಳಿಸಲಾಗಿದೆ. ಒಟ್ಟು ಉತ್ತೀರ್ಣತೆಗೆ 33 ಶೇಕಡಾ (625ರಲ್ಲಿ 206 ಅಂಕ) ಅಗತ್ಯವಿದೆ.

ಫಲಿತಾಂಶ ಇಲ್ಲಿ ಪರೀಕ್ಷಿಸಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಫಲಿತಾಂಶವು https://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಜತೆಗೆ karnatakaOne ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪಡೆಯಬಹುದು. ಜತೆಗೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸಾಪ್ ಅಥವಾ ಎಸ್ಎಂಎಸ್ ಸಂದೇಶದ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರವಾನಿಸಲಿದೆ.

ಡಿಜಿಲಾಕರ್‌ನಿಂದ ಅಂಕಪಟ್ಟಿ ಹೀಗೆ ಪಡೆದುಕೊಳ್ಳಿ.

ಈ ವರ್ಷ ಮೊದಲ ಬಾರಿಗೆ ಫಲಿ ತಾಂಶದ ಅಂಕಪಟ್ಟಿ ಡಿಜಿಲಾಕರ್ ಮೂಲಕ ಏ.23 ರಂದು ಮಧ್ಯಾಹ್ನ ಗಂಟೆಗೆ ಲಭ್ಯವಿರುವಂತೆ ಮಾಡಲಾಗುವುದು. https:// www.digilocker.gov.in ಮೂಲಕ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯನ್ನು https://tinyurl.com/mw84wmh9 ಲಿಂಕ್ ಬಳಸಿ ತಿಳಿದುಕೊಳ್ಳಬಹುದು ಎಂದು ಮಂಡಳಿ ತಿಳಿಸಿದೆ.

Comments


bottom of page