top of page

ಉತ್ತರ ಕನ್ನಡ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ

  • Writer: new waves technology
    new waves technology
  • Dec 16, 2024
  • 1 min read

ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.

ಅಂಕೋಲಾ: ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.


ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ಇಡೀ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ .2020ರಲ್ಲಿ ಅಂದಿನ ರಾಷ್ಟ್ರಪತಿ ರಮಾನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ತುಳಸಿಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


ತುಳಸಿಗೌಡ ಅವರ ನಿಧನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಂತಾಪ ಸೂಚಿಸಿದ್ದಾರೆ.

Comments


bottom of page