top of page

ಎಸ್ಎಂ ಕೃಷ್ಣಗೆ ಅಂತಿಮ ನಮನ ಸಲ್ಲಿಸಿದ ನಟಿ ರಮ್ಯ

  • Writer: new waves technology
    new waves technology
  • Dec 10, 2024
  • 1 min read

ಸದಾಶಿವ ನಗರದಲ್ಲಿರುವ ನಿವಾಸದತ್ತ ಧಾವಿಸುತ್ತಿರುವ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ನ ಮಾಜಿ ಸಂಸದೆ, ನಟಿ ರಮ್ಯ ಸಹ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ (92) ಇಂದು ನಿಧನರಾದರು.

ಸದಾಶಿವ ನಗರದಲ್ಲಿರುವ ನಿವಾಸದತ್ತ ಧಾವಿಸುತ್ತಿರುವ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ನ ಮಾಜಿ ಸಂಸದೆ, ನಟಿ ರಮ್ಯ ಸಹ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಮ್ಯಾ, ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದಷ್ಟೇ ಹೇಳಿದರು. ಮಂಡ್ಯ ಸಂಸದೆಯಾಗಿದ್ದ ರಮ್ಯಾ, ಅವರ ರಾಜಕೀಯ ಜೀವನ ರೂಪುಗೊಂಡಿದ್ದಿದ್ದೂ ಎಸ್ಎಂ ಕೃಷ್ಣ ಅವರ ಮಾರ್ಗದರ್ಶನದಲ್ಲೇ ಎಂಬುದು ಮತ್ತೊಂದು ಗಮನಾರ್ಹ ಸಂಗತಿ.

ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

Comments

bottom of page