top of page

ಕದನ ವಿರಾಮ: 'ಗುಂಡಿನ ಶಬ್ದವಿಲ್ಲ.. ಬಾಂಬ್ ಸ್ಫೋಟವಿಲ್ಲ.. ಶಾಂತಿಯಿಂದ ನಿದ್ರೆ ಮಾಡಿದ ಗಡಿ ಜನತೆ'

  • Writer: new waves technology
    new waves technology
  • May 12
  • 1 min read

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ನಿನ್ನೆ ರಾತ್ರಿ ಶಾಂತಿಯುತವಾಗಿತ್ತು, ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ಗುಂಡಿನ ಚಕಮಕಿ ನಡೆದ ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ.

ಶ್ರೀನಗರ: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದ್ದು, ಗಡಿಯಲ್ಲಿ ಕಳೆದ ರಾತ್ರಿ ಗುಂಡಿನ ಶಬ್ದವಿಲ್ಲದೇ.. ಬಾಂಬ್ ಸ್ಫೋಟವಿಲ್ಲದೇ.. ಜನತೆ ಶಾಂತಿಯಿಂದ ನಿದ್ರೆ ಮಾಡಿದ್ದಾರೆ.

ಹೌದು.. ಕಳೆದೊಂದು ವಾರದಿಂದ ಜೀವ ಭಯದಲ್ಲೇ ಸಮಯ ದೂಡಿದ್ದ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ನಿನ್ನೆ ರಾತ್ರಿ ಶಾಂತಿಯುತವಾಗಿತ್ತು, ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ಗುಂಡಿನ ಚಕಮಕಿ ನಡೆದ ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದಕ್ಕೆ ಬಂದ ಎರಡು ದಿನಗಳ ನಂತರ "ಜಮ್ಮು ಮತ್ತು ಕಾಶ್ಮೀರ ಮತ್ತು ಅಂತಾರಾಷ್ಟ್ರೀಯ ಗಡಿಯಾದ್ಯಂತ ರಾತ್ರಿ ಬಹುತೇಕ ಶಾಂತಿಯುತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಮೊದಲ ಶಾಂತಿಯುತ ರಾತ್ರಿಯನ್ನು ಗುರುತಿಸುವ ಮೂಲಕ ಯಾವುದೇ ಘಟನೆಗಳು ವರದಿಯಾಗಿಲ್ಲ" ಎಂದು ಸೇನೆಯು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು 'ಆಪರೇಷನ್ ಸಿಂಧೂರ' ಕುರಿತು ಎರಡೂ ದೇಶಗಳ ನಡುವಿನ ಮಿಲಿಟರಿ ಸಂಘರ್ಷದಿಂದಾಗಿ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿತ್ತು. ಆದಾಗ್ಯೂ, ಮೇ 10 ರಂದು, ಭಾರತ ಮತ್ತು ಪಾಕಿಸ್ತಾನ ಎರಡೂ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು.

ಮೇ 10 ರ ರಾತ್ರಿ, ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಕೆಲವು ಡ್ರೋನ್ ದಾಳಿಯಾಗಿತ್ತು. ಆದಾಗ್ಯೂ, ಭಾರತ ಪಾಕಿಸ್ತಾನಕ್ಕೆ ಪ್ರತೀಕಾರದ ಎಚ್ಚರಿಕೆ ನೀಡಿದ ನಂತರ, ಕದನ ವಿರಾಮ ಉಲ್ಲಂಘನೆಗಳು ನಿಂತುಹೋಗಿವೆ ಎಂದು ಸೇನೆ ತಿಳಿಸಿದೆ.

Comments


bottom of page