ಕಳೆದ ರಾತ್ರಿ ಏನಾಯ್ತು ಕೊಹ್ಲಿಗೆ?....; ಮೊದಲ ಏಕದಿನ ಪಂದ್ಯದಿಂದ Virat Kohli ಔಟ್.. ಕಾರಣ ನೀಡಿದ ನಾಯಕ ರೋಹಿತ್ ಶರ್ಮಾ!
- new waves technology
- Feb 6
- 1 min read
ಫಾರ್ಮ್ ಕಳೆದುಕೊಂಡಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ಗೆ ಮರಳುವ ವಿಶ್ವಾಸವಿತ್ತು. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಮೊದಲ ಪಂದ್ಯಕ್ಕೆ ಗೈರಾಗುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದಾರೆ.

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಕೈಬಿಡಲಾಗಿದ್ದು, ಏಕದಿನ ಸರಣಿಗಾಗಿ ರಣಜಿ ಟ್ರೋಫಿ ಸರಣಿಯನ್ನು ಮೊಟಕುಗೊಳಿಸಿ ನಾಗ್ಪುರಕ್ಕೆ ಬಂದಿದ್ದ ಕೊಹ್ಲಿಯನ್ನು ಪಂದ್ಯದಿಂದ ಕೈಬಿಟ್ಟಿದ್ದೇಕೆ ಎಂಬ ಪ್ರಶ್ನೆ ಕಾಡುತ್ತಿದೆ.
ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಒಂದು ರೀತಿಯ ಅಭ್ಯಾಸದ ಸರಣಿ ಎನಿಸಿಕೊಂಡಿರುವ ಈ ಮೂರು ಪಂದ್ಯಗಳ ಸರಣಿಯು ಉಭಯ ತಂಡಗಳ ಅತ್ಯಂತ ಪ್ರಮುಖ ಸರಣಿಯಾಗಿದ್ದು, ಫಾರ್ಮ್ ಕಳೆದುಕೊಂಡಿರುವ ಭಾರತದ ಸ್ಟಾರ್ ಬ್ಯಾಟರ್ ಗಳಿಗೆ ಇದು ಅತ್ಯಂತ ಪ್ರಮುಖ ಅವಕಾಶವಾಗಿದೆ.
ಈ ಸರಣಿಯಲ್ಲಿ ಫಾರ್ಮ್ ಕಳೆದುಕೊಂಡಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ಗೆ ಮರಳುವ ವಿಶ್ವಾಸವಿತ್ತು. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಮೊದಲ ಪಂದ್ಯಕ್ಕೆ ಗೈರಾಗುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದಾರೆ.
ಇಷ್ಟಕ್ಕೂ ಕೊಹ್ಲಿಯನ್ನು ಕೈಬಿಟ್ಟಿದ್ದೇಕೆ? ರೋಹಿತ್ ಶರ್ಮಾ ಹೇಳಿದ್ದೇನು?
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಇದೀಗ ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಮೂಲಕ ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದರು. ಆದರೆ ಟಾಸ್ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮೊದಲ ಏಕದಿನ ಪಂದ್ಯಕ್ಕೆ ದುರಾದೃಷ್ಟವಶಾತ್ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೊಹ್ಲಿಗೆ ಗಾಯದ ಸಮಸ್ಯೆ
ಇದೇ ವೇಳೆ ಕೊಹ್ಲಿ ಅಲಭ್ಯತೆಗೂ ಕಾರಣ ತಿಳಿಸಿರುವ ರೋಹಿತ್ ಶರ್ಮಾ, ಕಳೆದ ರಾತ್ರಿ ಕೊಹ್ಲಿ ಬಲಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ದುರಾದೃಷ್ಟವಶಾತ್ ಇಂಗ್ಲೆಂಡ್ ಎದುರಿನ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಇದೇ ಕಾರಣಕ್ಕಾಗಿ ವಿರಾಟ್ ಕೊಹ್ಲಿ ಬದಲಿಗೆ ಯಶಸ್ವಿ ಜೈಸ್ವಾಲ್ ಭಾರತ ಏಕದಿನ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಇದೇ ವೇಳೆ ವೇಗದ ಬೌಲರ್ ಹರ್ಷಿತ್ ರಾಣಾ ಕೂಡಾ ಏಕದಿನ ಕ್ರಿಕೆಟ್ ಮಾದರಿಗೆ ಪಾದಾರ್ಪಣೆ ಮಾಡಿದ್ದಾರೆ.
Comments