top of page

ಕೇಂದ್ರ ಬಜೆಟ್​​ನಲ್ಲಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಿ: ನಿರ್ಮಲಾ ಸೀತಾರಾಮನ್​​ಗೆ ಡಿಕೆಶಿ ಪತ್ರನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್​​ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅ

  • Writer: new waves technology
    new waves technology
  • Jan 25
  • 1 min read

ಬೆಂಗಳೂರು: ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಅಗತ್ಯಗಳನ್ನು ಪೂರೈಸಲು ಕೇಂದ್ರ ಬಜೆಟ್​​ನಲ್ಲಿ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್​​ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, ಭಾರತದ ತಂತ್ರಜ್ಞಾನ ಕೇಂದ್ರವಾಗಿ ಬೆಂಗಳೂರು ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ ಮತ್ತು "ದೇಶದ ಸಿಲಿಕಾನ್ ವ್ಯಾಲಿ" ಎಂಬ ಸ್ಥಾನಮಾನವನ್ನು ಕಾಯ್ದುಕೊಳ್ಳಲು ನಗರದ ತುರ್ತು ಅವಶ್ಯಕತೆಗಳನ್ನು ಪೂರೈಸುವ ಅಗತ್ಯ ಇದೆ ಎಂದು ಒತ್ತಿ ಹೇಳಿದ್ದಾರೆ.

1.5 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಂಗಳೂರು, ವಿಶೇಷವಾಗಿ ತಂತ್ರಜ್ಞಾನ ವಲಯದಲ್ಲಿ ಅಗಾಧ ಬೆಳವಣಿಗೆಯನ್ನು ಕಂಡಿದ್ದು, ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಗಳನ್ನು ಆಕರ್ಷಿಸುತ್ತಿದೆ.ಆದಾಗ್ಯೂ, ನಗರದಲ್ಲಿ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳು ಅದರ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯ ಬೇಡಿಕೆಗಳನ್ನು ಪೂರೈಸಲು ಹೆಣಗಾಡುತ್ತಿದೆ ಎಂದು ಡಿಕೆ ಶಿವಕುಮಾರ್ ಗಮನಸೆಳೆದಿದ್ದಾರೆ.

ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್​ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್​​ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್​ಗೆ 12 ಸಾವಿರ ಕೋಟಿ ರೂ. ಅಗತ್ಯವಿದೆ ಎಂದು ಡಿಸಿಎಂ ಉಲ್ಲೇಖಿಸಿದ್ದಾರೆ.

ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬಿಸಿನೆಸ್ ಕಾರಿಡಾರ್​ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್​ನಲ್ಲಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಡಿಸಿಎಂ, ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದ್ದಾರೆ.


Comments


bottom of page