ಕೋಲಾರ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಭೀಕರ ಡಿಕ್ಕಿ, ಐವರ ದುರ್ಮರಣ!
- new waves technology
- Dec 18, 2024
- 1 min read
ಭೀಕರ ಅಪಘಾತದಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ, ವೆಂಕಟರಾಮಪ್ಪ, ಅಲುವೇಲಮ್ಮ ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ.

ಕೋಲಾರ: ಮುಳಬಾಗಿಲು ತಾಲ್ಲೂಕಿನ ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ, ವೆಂಕಟರಾಮಪ್ಪ, ಅಲುವೇಲಮ್ಮ ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಗಲಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Comments