top of page

ಗುಜರಾತ್‌ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

  • Writer: new waves technology
    new waves technology
  • Jun 12
  • 1 min read

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

ನವದೆಹಲಿ: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಭಾರತದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಇದು ಒಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ.

ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಅಪಘಾತದ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಅಹಮದಾಬಾದ್ ವಿಮಾನ ಅಪಘಾತದಲ್ಲಿ ಏನು ತಪ್ಪಾಗಿದೆ ಎಂಬುದರ ಕುರಿತು ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ.

1956 ರಲ್ಲಿ ಅರಿಯಲೂರ್ ರೈಲು ಅಪಘಾತದ ನಂತರ ರೈಲ್ವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಉದಾಹರಣೆ ನೀಡಿದ ಸುಬ್ರಮಣಿಯನ್ ಸ್ವಾಮಿ, ಈ ಭೀಕರ ರೈಲು ಅಪಘಾತದಲ್ಲಿ ಸುಮಾರು 150 ಜನರು ಸಾವನ್ನಪ್ಪಿದ್ದರು ಮತ್ತು ಅದರ ನೈತಿಕ ಹೊಣೆ ಹೊತ್ತು ಶಾಸ್ತ್ರಿ ರಾಜೀನಾಮೆ ನೀಡಿದ್ದರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"1950ರಲ್ಲಿ ರೈಲು ಅಪಘಾತ ಸಂಭವಿಸಿದಾಗ, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ್ದರು. ಅದೇ ನೈತಿಕತೆಯ ಆಧಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ನಾಗರಿಕ ವಿಮಾನ ಸಚಿವ ರಾಮ್ ಮೋಹನ್ ನಾಯ್ಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ನಾನು ಆಗ್ರಹಿಸುತ್ತೇನೆ" ಎಂದು ಸ್ವಾಮಿ ಹೇಳಿದ್ದಾರೆ.

ದುರಂತ ನಡೆದು ಕೆಲವೇ ಗಂಟೆಗಳಲ್ಲಿ ಪ್ರಕರಣವನ್ನು ರಾಜಕೀಯಗೊಳಿಸಿದ್ದಕ್ಕಾಗಿ ಸುಬ್ರಮಣಿಯನ್ ಸ್ವಾಮಿ ಅವರ ಬೇಡಿಕೆಗೆ ತಕ್ಷಣ ಟೀಕೆ ವ್ಯಕ್ತವಾಗಿದೆ. ವಿಮಾನ ದುರಂತದಲ್ಲಿ 110 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದು, ಅಧಿಕೃತ ಸಾವಿನ ಸಂಖ್ಯೆ ಇನ್ನೂ ಬಹಿರಂಗವಾಗಿಲ್ಲ.

Comentários


bottom of page