top of page

ಛತ್ತೀಸ್‌ಗಢ: ನಿರ್ಮಾಣ ಹಂತದ ಸ್ಥಾವರದಲ್ಲಿ ಚಿಮಣಿ ಕುಸಿತ, ಹಲವು ಕಾರ್ಮಿಕರು ಸಾವು ಶಂಕೆ

  • Writer: new waves technology
    new waves technology
  • Jan 9
  • 1 min read

ಸಾವುನೋವುಗಳು ಅಥವಾ ಗಾಯಗೊಂಡವರ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ರಾಯ್‌ಗಢ: ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಕಬ್ಬಿಣ ತಯಾರಿಸುವ ನಿರ್ಮಾಣ ಹಂತದ ಸ್ಥಾವರದಲ್ಲಿ ಗುರುವಾರ ಭಾರಿ ಗಾತ್ರದ ಚಿಮಣಿ ಕುಸಿದು ಬಿದ್ದಿದ್ದು, ಹಲವು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸಾವುನೋವುಗಳು ಅಥವಾ ಗಾಯಗೊಂಡವರ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಜಿಲ್ಲೆಯ ಸರಗಾಂವ್ ಪ್ರದೇಶದಲ್ಲಿರುವ ಸ್ಥಾವರದಲ್ಲಿ ಇಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎಂದು ಮುಂಗೇಲಿ ಪೊಲೀಸ್ ವರಿಷ್ಠಾಧಿಕಾರಿ ಭೋಜ್ರಾಮ್ ಪಟೇಲ್ ತಿಳಿಸಿದ್ದಾರೆ.


ಪ್ರಾಥಮಿಕ ಮಾಹಿತಿಯ ಪ್ರಕಾರ, ಚಿಮಿಣಿ ಕುಸಿದು ಸ್ಥಳದಲ್ಲಿದ್ದ ಕೆಲವು ಕಾರ್ಮಿಕರು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಎಂದು ಮುಂಗೇಲಿ ಪೊಲೀಸ್ ವರಿಷ್ಠಾಧಿಕಾರಿ ಭೋಜ್ರಾಮ್ ಪಟೇಲ್ ತಿಳಿಸಿದ್ದಾರೆ.

ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಗೊಂಡ ಕಾರ್ಮಿಕರನ್ನು ರಕ್ಷಿಸಿ ಬಿಲಾಸ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇಲ್ಲಿಯವರೆಗೆ, ಇಬ್ಬರು ಗಾಯಗೊಂಡ ಕಾರ್ಮಿಕರನ್ನು ರಕ್ಷಿಸಿ ಬಿಲಾಸ್‌ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕುಸಿದ ರಚನೆಯ ಅಡಿಯಲ್ಲಿ ಇನ್ನೂ ಅನೇಕ ಕಾರ್ಮಿಕರು ಸಿಲುಕಿದ್ದಾರೆ ಎಂದು ವರದಿಯಾಗಿದೆ ಮತ್ತು ಅವರನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Comments


bottom of page