ಜಯನಗರ ಹೊರತು ಪಡಿಸಿ ಬೆಂಗಳೂರು ರಸ್ತೆಗಳ ಅಭಿವೃದ್ಧಿಗೆ 10 ಕೋಟಿ: ವಿವಾದ ಹುಟ್ಟು ಹಾಕಿದ DCM ಆದೇಶ!
- new waves technology
- Oct 29, 2024
- 1 min read
ಸರ್ಕಾರದ ಕ್ರಮಗಳು ಸೇಡಿನ ರಾಜಕಾರಣಕ್ಕೆ ಸಮಾನವಾಗಿದೆ, ಕಾಂಗ್ರೆಸ್‌ಗೆ ಮತ ಹಾಕದ ನಾಗರಿಕರನ್ನು ಸರ್ಕಾರ ಶಿಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. “ಡಿಸಿಎಂ ಬ್ರಾಂಡ್ ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ. ಅವರ ಬ್ರಾಂಡ್ ಬೆಂಗಳೂರು ಕನಸು ಜಯನಗರವನ್ನು ಹೊರತುಪಡಿಸುತ್ತದೆಯೇ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಇತ್ತೀಚಿನ ಆದೇಶವು ಪ್ರಮುಖ ವಿರೋಧ ಪಕ್ಷವಾದ ಬಿಜೆಪಿಗೆ ಚರ್ಚೆ ಮಾಡಲು ಅವಕಾಶ ಒದಗಿಸಿಕೊಟ್ಟಿದೆ. ಬಿಜೆಪಿ ಶಾಸಕ ಪ್ರತಿನಿಧಿಸುವ ಜಯನಗರ ವಿಧಾನಸಭಾ ಕ್ಷೇತ್ರವನ್ನು ಈ ಅನುದಾನ ಹಂಚಿಕೆಯಿಂದ ಹೊರಗಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.
ಸರ್ಕಾರದ ಕ್ರಮಗಳು ಸೇಡಿನ ರಾಜಕಾರಣಕ್ಕೆ ಸಮಾನವಾಗಿದೆ, ಕಾಂಗ್ರೆಸ್‌ಗೆ ಮತ ಹಾಕದ ನಾಗರಿಕರನ್ನು ಸರ್ಕಾರ ಶಿಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. “ಡಿಸಿಎಂ ಬ್ರಾಂಡ್ ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ. ಅವರ ಬ್ರಾಂಡ್ ಬೆಂಗಳೂರು ಕನಸು ಜಯನಗರವನ್ನು ಹೊರತುಪಡಿಸುತ್ತದೆಯೇ? ಎಂದು ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಪ್ರಶ್ನಿಸಿದ್ದಾರೆ. ತಮ್ಮ ಕ್ಷೇತ್ರಕ್ಕೆ ಉದ್ಯಾನವನಗಳು, ರಸ್ತೆಗಳು ಮತ್ತು ಚರಂಡಿಗಳನ್ನು ನಿರ್ವಹಿಸಲು ಹಣದ ಅಗತ್ಯವಿದೆ ಎಂದು ಅವರು ಹೇಳಿದರು. ಇದು ಕಾಂಗ್ರೆಸ್ ಸರ್ಕಾರದ ಸೇಡಿನ ರಾಜಕಾರಣವನ್ನು ಎತ್ತಿ ತೋರಿಸುತ್ತದೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ಹಾಗೂ ಬೆಂಗಳೂರು ನಗರ ಜಿಲ್ಲೆಯ ಭಾಗವಾಗಿರುವ ಆನೇಕಲ್‌ಗೆ 5 ಕೋಟಿ ರೂ. ಸೇರಿದಂತೆ ಒಟ್ಟು 265 ಕೋಟಿ ರೂ ಅನುದಾನ ಮಂಜೂರು ಮಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ಆದೇಶಕ್ಕೆ ಸ್ಪಷ್ಟನೆ ನೀಡಿದ್ದಾರೆ, ಕೆಲವು ಕಾರಣಗಳಿಂದ ಈ ಗೊಂದಲ ಉಂಟಾಗಿದೆ, ತಾರತಮ್ಯವಿಲ್ಲದೆ ಹಣ ಮಂಜೂರು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯಲಹಂಕ ವಿಧಾನಸಭೆಯನ್ನು ಎರಡು ಬಾರಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ, ಇದು ಸಮಸ್ಯೆಗೆ ಕಾರಣ ಎಂದು ನಾನು ನಂಬುತ್ತೇನೆ. ಡಿಸಿಎಂ ಬೆಂಗಳೂರಿನ ಅಭಿವೃದ್ಧಿ ಗುರಿ ಹೊಂದಿದ್ದು, ತಾರತಮ್ಯ ಮಾಡುವುದಿಲ್ಲ. ದೋಷಗಳಿಲ್ಲದ ಪರಿಷ್ಕೃತ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದಿದ್ದಾರೆ. ಬೆಂಗಳೂರಿನ ರಸ್ತೆಗಳ ಕಳಪೆ ಸ್ಥಿತಿಯಿಂದಾಗಿ ಹಣ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ, ಕಳೆದ ವಾರದ ದಾಖಲೆಯ ಮಳೆಯ ನಂತರ ರಸ್ತೆಗಳು ಹದಗೆಟ್ಟಿದೆ, ಇದು ಸಾಮಾನ್ಯ ಜೀವನದ ಮೇಲೆ ತೀವ್ರ ಪರಿಣಾಮ ಬೀರಿತ್ತು. ವಿಶೇಷವಾಗಿ ಉತ್ತರ ಬೆಂಗಳೂರು ಮತ್ತು ಮಹದೇವಪುರ, ಬೊಮ್ಮನಹಳ್ಳಿ ಮತ್ತು ಸರ್ಜಾಪುರ ರಸ್ತೆಯ ಐಟಿ ಬೆಲ್ಟ್‌ಗಳಲ್ಲಿ ಭಾರೀ ಮಳೆಯಿಂದಾಗಿ ಸಾವಿರಾರು ಗುಂಡಿಗಳು ಮತ್ತೆ ತಲೆ ಎತ್ತಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
Comments