ಡಿಕೆಶಿ ವಿರುದ್ಧ ಮುಂದುವರಿದ ಸಿದ್ದು ಕ್ಯಾಂಪ್ ಸಚಿವರ ಶೀತಲ ಸಮರ: ಡಿಸಿಎಂ ಜೊತೆ ವೇದಿಕೆ ಹಂಚಿಕೊಳ್ಳದ ರಾಜಣ್ಣ- ಪರಮೇಶ್ವರ್!
- new waves technology
- Apr 2
- 1 min read
ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಇಬ್ಬರೂ ಮುಖ್ಯ ಅತಿಥಿಗಳಾಗಿದ್ದರು. ಆದರೆ ಪರಮೇಶ್ವರ್ ಬರಲಿಲ್ಲ, ಆದರೆ ರಾಜಣ್ಣ ಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ ವೇದಿಕೆಗೆ ಬರದೆ ಹೊರಟುಹೋದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಕ್ಯಾಂಪ್ ನಲ್ಲಿ ಗುರುತಿಸಿಕೊಂಡಿರುವ ಕೆಲ ಸಚಿವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶೀತಲ ಸಮರ ಮುಂದುವರಿಸಿದ್ದಾರೆ.
ಮಂಗಳವಾರ ಸಿದ್ದಗಂಗಾ ಮಠದಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಯವರ 118 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಶಿವಕುಮಾರ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿಲ್ಲ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಇಬ್ಬರೂ ಮುಖ್ಯ ಅತಿಥಿಗಳಾಗಿದ್ದರು. ಆದರೆ ಪರಮೇಶ್ವರ್ ಬರಲಿಲ್ಲ, ಆದರೆ ರಾಜಣ್ಣ ಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ ವೇದಿಕೆಗೆ ಬರದೆ ಹೊರಟುಹೋದರು.
ಮಾಜಿ ಸಚಿವ ಗುಬ್ಬಿಯ ಎಸ್.ಆರ್. ಶ್ರೀನಿವಾಸ್, ಕುಣಿಗಲ್ ಶಾಸಕ ಡಾ. ರಂಗನಾಥ್ ಮತ್ತು ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಸೇರಿದಂತೆ ಶಿವಕುಮಾರ್ ಅವರ ಪಡೆ ಶಾಸಕರು ಡಿಸಿಎಂ ಜೊತೆ ಭಾಗವಹಿಸಿದ್ದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಬಿಜೆಪಿ ಶಾಸಕರಾದ ಬಿ. ಸುರೇಶ್ ಗೌಡ ಮತ್ತು ಜಿ. ಬಿ. ಜ್ಯೋತಿಗಣೇಶ್ ಭಾಗವಹಿಸಿದ್ದರು. ಆದರೆ ಸಚಿವರು ತಮ್ಮ ತವರು ಜಿಲ್ಲೆಯಲ್ಲಿ ನಡೆದ ಪ್ರಮುಖ ಕಾರ್ಯಕ್ರಮದಲ್ಲಿ ಭಾಗವಹಿಸದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
コメント