top of page

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ; ಮೂವರ ಸಾವು, 20 ಮಂದಿಗೆ ಗಾಯ

  • Writer: new waves technology
    new waves technology
  • Dec 2, 2024
  • 1 min read

ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ.










ತುಮಕೂರು: ಖಾಸಗಿ ಬಸ್ಸೊಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ನಡೆದಿದೆ,

ಇಂದು ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್​ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಮೃತ ಮಹಿಳೆಯರನ್ನು ಸಿಂಬಾಳಿ ಸಿಂಗ್, ಊರ್ವಿ ಹಾಗೂ ಪ್ರಿಯಾಂಕ ಮೃತ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 20 ಜನ ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆ ಹಾಗೂ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಸ್​ನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments


bottom of page