top of page

ದಿನಕ್ಕೊಂದು ಸುಳ್ಳು, ತಿಂಗಳಿಗೊಂದು ದರ ಏರಿಕೆ: ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರದ ಆಡಳಿತದ ವೈಖರಿ ಇದು!

  • Writer: new waves technology
    new waves technology
  • Apr 1
  • 1 min read

ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದ್ದು, ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದಿನಕ್ಕೊಂದು ಸುಳ್ಳು, ತಿಂಗಳಿಗೊಂದು ದರ ಏರಿಕೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು. ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ಪಂಚ ಗ್ಯಾರೆಂಟಿ ನೆಪ ನೀಡಿ, ಜನರ ಲೂಟಿ ಮಾಡುತ್ತಿದೆ. ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದ್ದು, ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ ಹೇರುತ್ತಿದೆ. ಈ ಮೂಲಕ ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ಕಿಡಿಕಾರಿದ್ದಾರೆ.


Comments


bottom of page