ದೆಹಲಿ-ಶಿರಡಿ ವಿಮಾನದಲ್ಲಿ ಗಗನಸಖಿ ಜೊತೆ ಅನುಚಿತ ವರ್ತನೆ: ಪಾನಮತ್ತ ಪ್ರಯಾಣಿಕನ ಬಂಧನ
- new waves technology
- May 5
- 1 min read
ಬಂಧಿತ ಪ್ರಯಾಣಿಕ ವಿಮಾನದ ಶೌಚಾಲಯದ ಬಳಿ ಗಗನಸಖಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಕೂಡಲೇ ಆಕೆ ಆರೋಪಿಯ ಅನುಚಿತ ವರ್ತನೆಯನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ವಿಮಾನ ನಿಲ್ದಾಣದ ಪೊಲೀಸರಿಗೆ ತಿಳಿಸಿದ್ದಾರೆ.

ಮುಂಬೈ: ದೆಹಲಿಯಿಂದ ಮಹಾರಾಷ್ಟ್ರದ ಶಿರಡಿಗೆ ಬರುತ್ತಿದ್ದ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವೊಂದು ಕೇಳಿ ಬಂದಿದೆ.
ಇಂಡಿಗೋ ವಿಮಾನ ಶುಕ್ರವಾರ ಮಧ್ಯಾಹ್ನ ಶಿರಡಿ ವಿಮಾನ ನಿಲ್ದಾಣ ತಲುಪುತ್ತಿದ್ದಂತೆಯೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಯಾಣಿಕ ವಿಮಾನದ ಶೌಚಾಲಯದ ಬಳಿ ಗಗನಸಖಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಕೂಡಲೇ ಆಕೆ ಆರೋಪಿಯ ಅನುಚಿತ ವರ್ತನೆಯನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ವಿಮಾನ ನಿಲ್ದಾಣದ ಪೊಲೀಸರಿಗೆ ತಿಳಿಸಿದ್ದಾರೆ.
ಬಳಿಕ ಅಧಿಕಾರಿಗಳು ವಿಮಾನ ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ರಹತಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ವ್ಯದ್ಯ ಮದ್ಯ ಸೇವಿಸಿರುವುದು ದೃಢಪಟ್ಟಿದೆ.
Commentaires