ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ಮಹಿಳೆಯರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ: ಗೃಹ ಸಚಿವ ಜಿ ಪರಮೇಶ್ವರ
- new waves technology
- Apr 8
- 2 min read
ಮಹಿಳೆಯರಿಗೆ ಸುರಕ್ಷತೆ ಮತ್ತು ರಕ್ಷಣೆ ನೀಡುವ ಮಹತ್ವದಲ್ಲಿ ನಂಬಿಕೆ ಇಟ್ಟಿರುವ ವ್ಯಕ್ತಿ ತಾನು. ಗೃಹ ಸಚಿವನಾಗಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧನಾಗಿದ್ದೇನೆ ಮತ್ತು ಈ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇನೆ ಎಂದರು.

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯ ಘಟನೆ ಕುರಿತು ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ ಇದು ಸಾಮಾನ್ಯ ಎಂದಿದ್ದ ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ, ತಮ್ಮ ಹೇಳಿಕೆಯನ್ನು ಸರಿಯಾಗಿ ಅರ್ಥೈಸಲಾಗಿದೆ ಮತ್ತು ಅದನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ.
ಇದು ಯಾರಿಗಾದರೂ, ವಿಶೇಷವಾಗಿ ಮಹಿಳೆಯರಿಗೆ ನೋವುಂಟುಮಾಡಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮಹಿಳೆಯರಿಗೆ ಸುರಕ್ಷತೆ ಮತ್ತು ರಕ್ಷಣೆ ನೀಡುವ ಮಹತ್ವದಲ್ಲಿ ನಂಬಿಕೆ ಇಟ್ಟಿರುವ ವ್ಯಕ್ತಿ ತಾನು. ಗೃಹ ಸಚಿವನಾಗಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧನಾಗಿದ್ದೇನೆ ಮತ್ತು ಈ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇನೆ ಎಂದರು.
ಏಪ್ರಿಲ್ 3 ರಂದು ಸುದ್ದುಗುಂಟೆಪಾಳ್ಯದಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಗೆ ಪ್ರತಿಕ್ರಿಯಿಸಿದ್ದ ಪರಮೇಶ್ವರ, 'ಪೊಲೀಸರು ಮಳೆ ಮತ್ತು ಚಳಿಯನ್ನು ಲೆಕ್ಕಿಸದೆ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ಶಾಂತಿ ನೆಲೆಸಿದೆ. ಬೆಂಗಳೂರಿನಂತಹ ದೊಡ್ಡ ನಗರದಲ್ಲಿ, ಇಂತಹ ಘಟನೆಗಳು ಅಲ್ಲೊಂದು ಇಲ್ಲೊಂದು ನಡೆಯುತ್ತವೆ' ಎಂದು ಹೇಳಿದ್ದರು.
ಈ ಹೇಳಿಕೆಯು ವಿವಾದ ಸೃಷ್ಟಿಸಿತ್ತು, ಪ್ರತಿಪಕ್ಷ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಯಿತು ಮತ್ತು ರಾಷ್ಟ್ರೀಯ ಮಹಿಳಾ ಆಯೋಗ (NCW) ಕೂಡ ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು.ಎನ್‌ಸಿಡಬ್ಲ್ಯು ಅಧ್ಯಕ್ಷೆ ವಿಜಯ ರಹತ್ಕರ್ ನಿರ್ದೇಶನದ ಮೇರೆಗೆ, ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ನೀಡಿರುವ ಸಂವೇದನಾಶೀಲ ಹೇಳಿಕೆಗಳನ್ನು ತೀವ್ರವಾಗಿ ಆಕ್ಷೇಪಿಸಿದೆ. ಇಂತಹ ಹೇಳಿಕೆಗಳು ಮಹಿಳೆಯರ ಮೇಲಿನ ಅಪರಾಧಗಳನ್ನು ಕ್ಷುಲ್ಲಕಗೊಳಿಸುತ್ತವೆ ಎಂದು ಆಯೋಗ ಹೇಳಿತ್ತು.
'ಗೃಹ ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ NCW ಕರ್ನಾಟಕದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ' ಎಂದು NCW 'X' ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.
ಮಂಗಳವಾರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಪರಮೇಶ್ವರ್, 'ನಿನ್ನೆ ನನ್ನ ಹೇಳಿಕೆಯನ್ನು ನೀವು (ಮಾಧ್ಯಮ) ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಮತ್ತು ಇತರ ವೇದಿಕೆಗಳು ಸಹ ಅದನ್ನು ವಿಭಿನ್ನವಾಗಿ ಅರ್ಥಮಾಡಿಕೊಂಡಿವೆ. ನಾನು ಯಾವಾಗಲೂ ಮಹಿಳೆಯರ ರಕ್ಷಣೆಯ ಪರವಾಗಿದ್ದೇನೆ. ಗೃಹ ಸಚಿವನಾಗಿ ನಾನು ನಿರ್ಭಯಾ ಯೋಜನೆಯಂತಹ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ' ಎಂದರು.
'ಇತರ ರಾಜ್ಯಗಳಿಗೆ ಹೋಲಿಸಿದರೆ ನಾವು ಹೆಚ್ಚು ನಿರ್ಭಯಾ ನಿಧಿಯನ್ನು ಖರ್ಚು ಮಾಡಿದ್ದೇವೆ ಮತ್ತು ಕೇಂದ್ರ ಸರ್ಕಾರದೊಂದಿಗೆ ಅದನ್ನು ಜಾರಿಗೆ ತಂದಿದ್ದೇವೆ. ಮಹಿಳೆಯರ ರಕ್ಷಣೆಗಾಗಿ ನಾವು ಏನು ಮಾಡಿದ್ದೇವೆ ಎಂಬುದನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ. ಕೆಲವು ಹೇಳಿಕೆಗಳನ್ನು ತಿರುಚುವುದು ಮತ್ತು ನನ್ನ ಬಗ್ಗೆ ಮಾತನಾಡುವುದು ಸರಿಯಲ್ಲ. ಮಹಿಳೆಯರು- ನಮ್ಮ ಸಹೋದರಿಯರು ಮತ್ತು ತಾಯಂದಿರ ರಕ್ಷಣೆಗಾಗಿ ನಾನು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇನೆ. (ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ) ಯಾವುದೇ ಸಮಸ್ಯೆಗಳಿದ್ದರೆ, ನಾನು ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿದ್ದೇನೆ. ಆದ್ದರಿಂದ ನನ್ನ ಹೇಳಿಕೆಯನ್ನು ತಿರುಚುವ ಮೂಲಕ ಅದನ್ನು ತಪ್ಪಾಗಿ ಬಿಂಬಿಸಬಾರದು' ಎಂದು ಹೇಳಿದರು.
Comments