top of page

ನೈನಿತಾಲ್‌: ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪರಾಷ್ಟ್ರಪತಿ ಧನಕರ್; ಆರೋಗ್ಯ ಸ್ಥಿರ

  • Writer: new waves technology
    new waves technology
  • Jun 25
  • 1 min read

ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ ಅನಿರೀಕ್ಷಿತವಾಗಿ ಅವರ ಆರೋಗ್ಯ ಹದಗೆಟ್ಟಿತು.

ಡೆಹ್ರಾಡೂನ್: ಮೂರು ದಿನಗಳ ಉತ್ತರಾಖಂಡ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಬುಧವಾರ ಹಲ್ದ್ವಾನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಠಾತ್ತನೆ ಕುಸಿದು ಬಿದ್ದಿದ್ದು, ತಕ್ಷಣ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಅವರನ್ನು ನೈನಿತಾಲ್ ರಾಜಭವನಕ್ಕೆ ಕರೆದೊಯ್ಯಲಾಯಿತು.

ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ ಅನಿರೀಕ್ಷಿತವಾಗಿ ಅವರ ಆರೋಗ್ಯ ಹದಗೆಟ್ಟಿತು. ಹಿಂದಿನ ದಿನ, ರಾಜ್ಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಯನ್ನು ಹಲ್ದ್ವಾನಿ ಸೇನಾ ಹೆಲಿಪ್ಯಾಡ್‌ನಲ್ಲಿ ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್(ನಿವೃತ್ತ) ಅವರು ಸ್ವಾಗತಿಸಿದ್ದರು.

ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದಲ್ಲಿ ನಡೆದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಉಪರಾಷ್ಟ್ರಪತಿ ಧನಕರ್ ಮುಖ್ಯ ಅತಿಥಿಯಾಗಿ 45 ನಿಮಿಷಗಳ ಭಾಷಣ ಮಾಡಿದರು. ಭಾಷಣದ ನಂತರ, ಉಪರಾಷ್ಟ್ರಪತಿ ವೇದಿಕೆಯಿಂದ ಇಳಿದು ತಕ್ಷಣ ಅವರ ಆರೋಗ್ಯ ಏರುಪೇರಾಗಿದ್ದು, ಅವರ ಜತೆ ಇದ್ದ ಮಾಜಿ ಸಂಸದ ಡಾ. ಮಹೇಂದ್ರ ಸಿಂಗ್ ಪಾಲ್ ಅವರ ಮೇಲೆಯೇ ಕುಸಿದು ಬಿದ್ದರು. ಸ್ಥಳದಲ್ಲೇ ಇದ್ದ ವೈದ್ಯರ ತಂಡ ಪ್ರಾಥಮಿಕ ಚಿಕಿತ್ಸೆ ನೀಡಿತು.

ನಂತರ ಅವರನ್ನು ರಾಜ್ಯಪಾಲ ಗುರ್ಮಿತ್ ಸಿಂಗ್ ಅವರೊಂದಿಗೆ ರಾಜಭವನಕ್ಕೆ ಕರೆದೊಯ್ಯಲಾಯಿತು. ನಂತರ ವೈದ್ಯರು "ಉಪರಾಷ್ಟ್ರಪತಿಯವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ" ಎಂದು ದೃಢಪಡಿಸಿದ್ದಾರೆ.

留言


bottom of page