ನಿನ್ನೆ ದುರಂತ, ಇಂದು ಬಾಂಬ್ ಭೀತಿ: ಥಾಯ್ಲೆಂಡ್ ನಲ್ಲಿ ತುರ್ತು ಲ್ಯಾಂಡಿಂಗ್, ಏನಾಗ್ತಿದೆ Air Indiaದಲ್ಲಿ?
- new waves technology
- Jun 13
- 1 min read
ಬಾಂಬ್ ಬೆದರಿಕೆ ಭೀತಿ ಹಿನ್ನಲೆಯಲ್ಲಿ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ.

ನವದೆಹಲಿ: ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಕ್ಕೀಡಾದ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಮತ್ತೊಂದು ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ.
ಥಾಯ್ಲೆಂಡ್‌ನ ಫುಕೆಟ್ (Thailand) ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (Air India flight) ಬಾಂಬ್ ಬೆದರಿಕೆ ಹಾಕಲಾಗಿದ್ದು, ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ.
ಬಾಂಬ್ ಬೆದರಿಕೆ ಭೀತಿ ಹಿನ್ನಲೆಯಲ್ಲಿ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ.
ಅಹಮದಾಬಾದ್ ವಿಮಾನ ದುರಂತ ಇನ್ನು ಮಾಸಿಲ್ಲ, ಈ ಹೊತ್ತಿನಲ್ಲೇ ಮತ್ತೊಂದು ಬೆದರಿಕೆ ಕಾರಣವಾಗಿದೆ.
ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇದೀಗ ಈ ವಿಚಾರ ಸಾರ್ವಜನಿಕರಲ್ಲಿ ಹಾಗೂ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.
ಇದೀಗ ಬಾಂಬ್ ಬೆದರಿಕೆಯ ನಂತರ ಏರ್ ಇಂಡಿಯಾ ವಿಮಾನ ಸಿಬ್ಬಂದಿಗಳು ವಿಮಾನ AI 379ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರೆದುಕೊಂಡು ಬಂದಿದ್ದಾರೆ ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹುಸಿ ಬಾಂಬ್ ಕರೆ
ಇನ್ನು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ ಬಳಿಕ ವಿಮಾನವನ್ನು ಶೋಧಕ್ಕೊಳಪಡಿಸಿದ ಅಧಿಕಾರಿಗಳು ಬಳಿಕ ವಿಮಾನದಲ್ಲಿ ಯಾವುದೇ ಬಾಂಬ್ ಇಲ್ಲ ಎಂಬುದನ್ನು ಪತ್ತೆ ಮಾಡಿದ್ದಾರೆ. ಇಲ್ಲದೆ ಇದೊಂದು ಹುಸಿ ಬಾಂಬ್ ಕರೆ ಎಂದು ಪರಿಗಣಿಸಿ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ.
ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ಈ ವೇಳೆ ಯಾರು ಭಯಪಡಬೇಡಿ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಪ್ರಯಾಣಿಕರಿಗೂ ಹೇಳಿದ್ದರು.
ಶುಕ್ರವಾರ ಬೆಳಿಗ್ಗೆ 9:30 ಕ್ಕೆ (0230) ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ್ಟಿತ್ತು. ಅಂಡಮಾನ್ ಸಮುದ್ರದ ಸುತ್ತಲೂ ವಿಶಾಲವಾದ ಲೂಪ್ ಮಾಡಿ ಥಾಯ್ ದ್ವೀಪದಲ್ಲಿ ಮತ್ತೆ ಇಳಿಯಿತು ಎಂದು ಫ್ಲೈಟ್ ಟ್ರ್ಯಾಕರ್ ಫ್ಲೈಟ್‌ರಾಡರ್ 24 ತಿಳಿಸಿದೆ. ಬಾಂಬ್ ಬೆದರಿಕೆಯ ಕುರಿತು AOT ಯಾವುದೇ ವಿವರಗಳನ್ನು ನೀಡಿಲ್ಲ ಎಂದು ಹೇಳಿದೆ.
Comments