top of page

ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತ ನೀಟ್ ತರಬೇತಿ; ಮರು ಸಿಂಚನ ಕಾರ್ಯಕ್ರಮ ಜಾರಿ: ಸಚಿವ ಮಧು ಬಂಗಾರಪ್ಪ

  • Writer: new waves technology
    new waves technology
  • Oct 25, 2024
  • 1 min read

ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ ಎಂದರು.











ಬೆಂಗಳೂರು: ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ ಎಂದರು.

ಮರು ಸಿಂಚನ ಕಾರ್ಯಕ್ರಮ: 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಪರೀಕ್ಷೆ ನಡೆಯಲಿದೆ. ಪಾಸ್​ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.


ಅನುದಾನಿತ ಶಾಲೆಯ ಎಲ್ಲ ಹುದ್ದೆಗಳಿಗೂ ಮುಂದಿನ ಐದು ವರ್ಷಗಳಲ್ಲಿ ಖಾಯಂ ಶಿಕ್ಷಕರ ನೇಮಕಾತಿ ಆಗಲಿದೆ. ಅನುದಾನಿತ ಕನ್ನಡ ಮಾಧ್ಯಮ ಶಾಲೆ‌ ಉಳಿಸಬೇಕಾಗಿದೆ.ಅಂಗನವಾಡಿಯಲ್ಲೇ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡಲಾಗಿದೆ.ಕಲ್ಯಾಣ ಕರ್ನಾಟಕದಲ್ಲಿಯೇ 1008 ಸಾವಿರ ಎಲ್​ಕೆಜಿ ಹಾಗೂ ಯುಕೆಜಿ ನರ್ಸರಿ ತೆರೆಯಲಾಗುತ್ತದೆ. ಈಗಾಗಲೇ 30 ಸಾವಿರ ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬ್ಯಾಗ್ ರಹಿತ ದಿನ: ಆದರ್ಶ ಶಾಲೆಗಳಲ್ಲಿ ಪಿಯುಸಿ ಕಾಲೇಜು ತೆರೆಯಲು ಅನುಮತಿ ನೀಡಲಾಗಿದೆ. ಇದರಿಂದ ಕಾಲೇಜು ಕೊರತೆ ನೀಗಿಸಲು ತೀರ್ಮಾನ ಮಾಡಿದ್ದೇವೆ. ತಿಂಗಳದ ಮೂರನೇ ಶನಿವಾರ ಬ್ಯಾಗ್ ರಹಿತ ದಿನ ಇರುತ್ತದೆ. ಶಿಕ್ಷಕರು ಕಡ್ಡಾಯವಾಗಿ ಇದನ್ನು ಪಾಲಿಸಬೇಕು ಎಂದರು.

Comments


bottom of page