top of page

ಪ್ರಮುಖ ನಾಯಕರುಗಳ ಅಪಮೃತ್ಯು, ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ: ಕೋಡಿ ಶ್ರೀಗಳ ಭಯಾನಕ ಭವಿಷ್ಯ!

  • Writer: new waves technology
    new waves technology
  • May 5
  • 1 min read

ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ.

ಬಾಗಲಕೋಟೆ: ಸಂಕ್ರಾಂತಿಯವರೆಗೂ ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ‌ ಸ್ವಾಮೀಜಿ, ವಾಯು, ಜಲ, ಭೂ ಮತ್ತು ಅಗ್ನಿ ಸುನಾಮಿಗಳು ಸಂಭವಿಸಲಿದ್ದು, ಹಿಮಾಲಯದಿಂದ ದೆಹಲಿಯವರೆಗೂ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ. ಜಗತ್ತಿನ ಪ್ರಮುಖ ನಾಯಕರಿಗೆ ಅಪಮೃತ್ಯುವಿದೆ ಎಂದೂ ಭವಿಷ್ಯ ನುಡಿದಿದ್ದಾರೆ.

ಪಹಲ್ಗಾಮ್ ದಾಳಿ ವಿಚಾರವಾಗಿ ಮಾತನಾಡಿದ ಅವರು, ಯುಗಾದಿ ಸಮಯದ ಭವಿಷ್ಯದಲ್ಲಿ ನಾವು ಹೇಳಿದ್ದೆವು. ಉತ್ತರದ‌ ನಾಡಿನಲ್ಲಿ ಹಗೆಯ ಹೆಬ್ಬೇಗೆ ಹಬ್ಬೀತು, ಹುಟ್ಟೀತು. ಸುತ್ತುವರೆದು ಬರುವಾಗ ಜಗವೆಲ್ಲ ಕೋಳಾದೀತು ಸಾಮೂಹಿಕ ಹತ್ಯೆಯಾಗುತ್ತದೆ ಅಂತ. ಅದು ಹೇಳಿದ ಕೆಲ ದಿನಗಳಲ್ಲಿ ಕಾಶ್ಮೀರದಲ್ಲಿ ಹತ್ಯೆ ಆಯ್ತು. ಮತಾಂಧತೆ ಹೆಚ್ಚಾಗಲಿದೆ, ದೊಡ್ಡ ಕಾಯಿಲೆ ಬರುತ್ತೆ ಅದು ಐದು ವರ್ಷ ಇರುತ್ತೆ. ಶಾಂತಿ ಇಲ್ಲ, ನೆಮ್ಮದಿ ಇಲ್ಲ ಎಂದಿದ್ದಾರೆ.

ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಉತ್ತರಿಸಿದ್ದಾರೆ. ಅಂದ್ರೆ ರಾಷ್ಟ್ರ ರಾಜಕಾರಣದಲ್ಲಿ ಮಹ್ವತದ ಬೆಳವಣಿಗೆ ನಡೆಯಲಿದೆ ಎಂಬುದನ್ನು ಹೇಳಿಂದಂತಿದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಜನ ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದು ಭವಿಷ್ಯ ನುಡಿದ್ದಾರೆ.

Comments


bottom of page