top of page

ಬಸವರಾಜ ಹೊರಟ್ಟಿ ವಿರುದ್ಧ ಕೇಸ್ ದಾಖಲಿಸದ ಡಿಜಿಪಿ ಅಲೋಕ್ ಮೋಹನ್, ಎಸ್​ಪಿಗೆ ನೋಟಿಸ್

  • Writer: new waves technology
    new waves technology
  • Dec 7, 2024
  • 1 min read

ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, 12 ರಂದು ಎಸ್ಟಿ ಆಯೋಗದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.










ಬೆಂಗಳೂರು: ಅಧಿಕಾರ ದುರುಪಯೋಗಪಡಿಸಿಕೊಂಡ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನೋಟಿಸ್ ಜಾರಿ ಮಾಡಿದೆ.

ಬಸವರಾಜ ಹೊರಟ್ಟಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ಎಸಗಿದ್ದು, ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಅರುಣ್ ಹಿರೇಹಾಳ ಎಂಬುವವರು ನೀಡಿದ ದೂರಿನ ಮೇರೆಗೆ ನೋಟಿಸ್ ಜಾರಿ ಮಾಡಲಾಗಿದೆ.

ಎಸ್ ಸಿಎಸ್ ಟಿ ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, 12 ರಂದು ಎಸ್ಟಿ ಆಯೋಗದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಬಸವರಾಜ ಹೊರಟ್ಟಿ ಅವರು ಚುನಾಯಿತ ಪ್ರತಿನಿಧಿಯಾಗಿದ್ದು, ಆರ್​. ಎನ್ ಪೂಜಾರ್ ಅವರು ಪರಿಶಿಷ್ಟ ಪಂಗಡದವರೆಂಬುವುದನ್ನು ತಿಳಿದು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು 2009ರಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಧಾರವಾಡದ ಸರ್ವೋದಯ ಶಿಕ್ಷಣ ಟ್ರಸ್ಟ್ ಅನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ ಎಂದು ದೂರುದಾರ ಅರುಣ್ ಹಿರೇಹಾಳ ಆರೋಪಿಸಿದ್ದಾರೆ.

"ಈ ಕಾಯ್ದೆಯು ಕಾನೂನುಬಾಹಿರವಾಗಿದೆ ಮತ್ತು ಪರಿಶಿಷ್ಟ ಪಂಗಡಗಳನ್ನು ಆರ್ಥಿಕವಾಗಿ ಹೊರಗಿಡುವಿಕೆಗೆ ಕಾರಣವಾಗಿದೆ. ಇದು ಪರಿಶಿಷ್ಟ ಪಂಗಡಗಳು ಮತ್ತು ಇತರರನ್ನು ಶೋಷಣೆಗೆ ಒಳಪಡಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಟ್ರಸ್ಟ್‌ನ ಸೇವೆಗಳಿಂದ ಪ್ರಯೋಜನ ಪಡೆಯುವ ಅರ್ಹತೆ ಹೊಂದಿರುವ ಪರಿಶಿಷ್ಟ ಪಂಗಡಗಳಿಗೆ ಆರ್ಟಿಕಲ್ 14 ರ ಅಡಿಯಲ್ಲಿ ಎಲ್ಲಾ ಹಕ್ಕುಗಳನ್ನು ನಿರಾಕರಿಸಲಾಗಿದೆ" ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Comments


bottom of page