'ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ: ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ'
- new waves technology
- Mar 11
- 1 min read
ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ದುರುದ್ದೇಶವಿಷ್ಟೇ; ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು.

ಬೆಂಗಳೂರು: ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ Divide and Rule. ಅಂದು: ಅಖಂಡ ಭಾರತವನ್ನು ಹೋಳು ಮಾಡಿತು!
ಇಂದು: ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ದುರುದ್ದೇಶವಿಷ್ಟೇ; ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದು. ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ. ಲೂಟರ್ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ.
ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ ಎಂದು ಕಿಡಿಕಾರಿದ್ದಾರೆ. ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಲೇವಡಿ ಮಾಡಿದ್ದಾರೆ.
Kommentare