top of page

ಬೆಂಗಳೂರಿನಲ್ಲಿ IT ದಾಳಿ: ಬಿಲ್ಡರ್, ಉದ್ಯಮಿಗಳ ಮನೆ, ಕಚೇರಿ ಸೇರಿ ಹಲವೆಡೆ ಶೋಧ

  • Writer: new waves technology
    new waves technology
  • Nov 27, 2024
  • 1 min read

ಕತ್ರಿಗುಪ್ಪೆಯ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ










ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ನಗರದ ಅನೇಕ ಬಿಲ್ಡರ್ ಗಳು, ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವೈಯಾಲಿಕಾವಲ್ , ಕತ್ರಿಗುಪ್ಪೆ ಮತ್ತಿತರ ಕಡೆಗಳಲ್ಲಿರುವ ಬಿಲ್ಡರ್ ಗಳು ಹಾಗೂ ಉದ್ಯಮಿಗಳಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.


ಕತ್ರಿಗುಪ್ಪೆಯ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದೇ ತಿಂಗಳ 7 ರಂದು ಬೆಂಗಳೂರಿನ ಕೆಲವು ಕಂಪನಿಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.


ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿತ್ತು ಎಂದು ತಿಳಿದು ಬಂದಿತ್ತು.ಇದೀಗ ಬಿಲ್ಡರ್ ಹಾಗೂ ಉದ್ಯಮಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದೆ.

コメント


bottom of page