top of page

ಬೆಂಗಳೂರು: ಪ್ರೇಯಸಿ ಕೊಂದು, ಶವದ ಜತೆ ಒಂದು ದಿನ ಕಳೆದು ಪ್ರಿಯಕರ ಪರಾರಿ!

  • Writer: new waves technology
    new waves technology
  • Nov 26, 2024
  • 1 min read

ವಿಷಯ ತಿಳಿಯುತ್ತಿದ್ದಂತೆಯೇ ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.










ಬೆಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್​ನಲ್ಲಿ ನಡೆದಿದೆ.

ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, ಆರವ್ ಹಾರ್ನಿ ಎಂಬ ಯುವಕ ಮಾಯಾಳನ್ನು ಕೊಂದು, ಶವದ ಜತೆ ಒಂದು ದಿನ ಕಳೆದು ಮಾರನೇ ದಿನ ಪರಾರಿಯಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.


ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡು ಹೆಚ್​ಎಸ್​ಆರ್​ ಲೇಔಟ್​​ನಲ್ಲಿ ವಾಸವಿದ್ದ ಮಾಯಾ ಗೊಗೋಯಿ, ನವೆಂಬರ್ 23ರಂದು ತನ್ನ ಪ್ರಿಯಕರ ಆರವ್ ಹಾರ್ನಿ ಜತೆ, ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ರೂಮ್ ಬುಕ್​ ಮಾಡಿಕೊಂಡು ತಂಗಿದ್ದರು. ಆದರೆ ಅದೇನಾಯ್ತೋ ಏನೋ ನಿನ್ನೆ ಸಂಜೆ ಪ್ರಿಯಕರ ಆರವ್ ಹಾರ್ನಿ, ತನ್ನ ಪ್ರೇಯಸಿ ಮಾಯಾಳನ್ನು ಕೊಂದು ಪರಾರಿಯಾಗಿದ್ದಾನೆ.

ನವೆಂಬರ್ 23ರಂದು ಮಧ್ಯಾಹ್ನ ಮಾಯಾ ಗೊಗೋಯ್ ಹಾಗೂ ಆರವ್ ಹಾರ್ನಿ ಇಬ್ಬರು ಒಟ್ಟಿಗೆ ತಂಗಲು ಅಪಾರ್ಟ್ ಮೆಂಟ್ ಗೆ ಆಗಮಿಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 24 ರಂದೇ ಮಾಯಾ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಕೊಲೆ ಬಳಿಕ ಅದೇ ರೂಮ್ ನಲ್ಲಿಯೇ ಉಳಿದುಕೊಂಡಿದ್ದಾನೆ. ಅಲ್ಲಿಯೇ ಕೂತು ಸಿಗರೇಟ್ ಸೇದಿದ್ದಾನೆ. ಮೃತದೇಹ ಜೊತೆಯಲ್ಲೇ ಕಾಲ ಕಳೆದಿದ್ದು, ಇಂದು ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಸರ್ವಿಸ್ ಅಪಾರ್ಟ್ ಮೆಂಟ್​ನಿಂದ ಕಾಲ್ಕಿತ್ತಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಇಂದಿರಾನಗರ ಪೊಲೀಸರು, ಕೊಲೆಗೆ ನಿಖರ ಕಾರಣ ಏನು ಎನ್ನುವುದನ್ನು ತನಿಖೆ ನಡೆಸಿದ್ದಾರೆ.

Comments


bottom of page