top of page

ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ವೇಳೆ ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಸೋರಿಕೆ: ಗಂಭೀರ್​ ಬಲಗೈ ಬಂಟರಿಗೆ ಗೇಟ್​ ಪಾಸ್?

  • Writer: new waves technology
    new waves technology
  • Apr 17
  • 1 min read

ಜೂನ್ 20ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ಸಿಬ್ಬಂದಿಗಳು ಭಾರತೀಯ ತಂಡವನ್ನು ಸೇರುವ ನಿರೀಕ್ಷೆಯಿದೆ.

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ಸಂದರ್ಭದಲ್ಲಿ ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಸಹಾಯಕ ಕೋಚ್‌ ಹಾಗೂ ಫೀಲ್ಡಿಂಗ್‌ ಕೋಚ್‌ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಬಿಸಿಸಿಐ ಕಿತ್ತೆಸೆದಿದೆ ಎಂದು ವರದಿಯಾಗಿದೆ

ಬ್ಯಾಟಿಂಗ್ ಕೋಚ್, ಫೀಲ್ಡಿಂಗ್ ಕೋಚ್, ಸ್ಟ್ರೆಂತ್ ಅಂಡ್ ಕಂಡೀಷನಿಂಗ್ ಕೋಚ್ ಮತ್ತು ಮಸಾಜರ್ ಸಿಬ್ಬಂದಿಯನ್ನ ಬಿಸಿಸಿಐ ತೆಗೆದುಹಾಕಿದೆ. ಇದರಲ್ಲಿ ಟೀಂ ಇಂಡಿಯಾದ ಮುಖ್ಯಕೋಚ್‌ ಗೌತಮ್‌ ಗಂಭೀರ್‌ ಅವರ ಆಪ್ತ ಅಭಿಷೇಕ್‌ ನಾಯರ್‌ ಅವರನ್ನೂ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ಗಂಭೀರ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ಫ್ರಾಂಚೈಸಿಯಲ್ಲಿದ್ದಾಗಲೇ ನಾಯರ್ ಆಪ್ತರಾಗಿದ್ದರು. ಗಂಭೀರ್‌ ಟೀಂ ಇಂಡಿಯಾ ಕೋಚ್‌ ಆದ ಬಳಿಕ ಸಹಾಯಕ, ಬ್ಯಾಟಿಂಗ್‌ ಕೋಚ್‌ ಆಗಿ ಅವರನ್ನ ನೇಮಕ ಮಾಡಿಕೊಳ್ಳಲಾಯಿತು. ಸದ್ಯ ಮುಂಬರುವ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯೊಳಗೆ ಈ ಹುದ್ದೆಗೆ ಬೇರೆಯವರನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

ಇದರ ಹೊರತಾಗಿ, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ಸ್ಟ್ರೆಂತ್ ಮತ್ತು ಕಂಡೀಷನಿಂಗ್ ಕೋಚ್ ಸೋಹಂ ದೇಸಾಯಿ ಅವರನ್ನು ಟೀಮ್ ಇಂಡಿಯಾದ ಸಹಾಯಕ ಸಿಬ್ಬಂದಿ ಹುದ್ದೆಗಳಿಂದ ಕಿತ್ತೆಸೆಯಲಾಗಿದೆ. ಅದೇ ಸಮಯದಲ್ಲಿ, ಒಬ್ಬ ಮಸಾಜ್ (ಫಿಸಿಯೋ ಸಪೋರ್ಟ್ ಸ್ಟಾಫ್) ಅನ್ನು ಸಹ ತೆಗೆದುಹಾಕಲಾಗಿದೆ.

ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ಸಂದರ್ಭದಲ್ಲಿ ಭಾರತ ತಂಡದ ಡ್ರೆಸ್ಸಿಂಗ್‌ ರೂಮ್‌ ಮಾಹಿತಿಯನ್ನ ಸೋರಿಕೆ ಮಾಡಲಾಗುತ್ತಿತ್ತು. ಟೀಂ ಇಂಡಿಯಾದಲ್ಲಿ ಹಂಗಾಮಿ ನಾಯಕನಾಗಲು ಬಯಸುವ ನಿರ್ದಿಷ್ಟ ಆಟಗಾರನಿದ್ದಾನೆ ಎಂಬ ಸುದ್ದಿಯೂ ಹರಿದಾಡಿತ್ತು.

ಜೊತೆಗೆ ಗೌತಮ್ ಗಂಭೀರ್ ಸರ್ಫರಾಜ್‌ ಖಾನ್‌ ಅವರನ್ನ ದೂಷಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಈ ಬೆಳವಣಿಗೆಯ ಬಗ್ಗೆ ಬಿಸಿಸಿಐ ಕಡೆಯಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

ಜೂನ್ 20ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ಸಿಬ್ಬಂದಿಗಳು ಭಾರತೀಯ ತಂಡವನ್ನು ಸೇರುವ ನಿರೀಕ್ಷೆಯಿದೆ.


Comments


bottom of page