top of page

ಬಿಹಾರ: ಚಲಿಸುತ್ತಿದ್ದ ರೈಲಿನ ಬೋಗಿಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ಕಾರ್ಮಿಕ! ಸಾವು

  • Writer: new waves technology
    new waves technology
  • Nov 9, 2024
  • 1 min read

ಈ ಭಯಾನಕ ಘಟನೆಯನ್ನು ನೋಡಿದ ಪ್ರಯಾಣಿಕರು ಕೂಗುತ್ತಿದ್ದಂತೆಯೇ, ರೈಲು ಚಾಲಕ ರೈಲಿನಿಂದ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.











ಬಿಹಾರ: ರೈಲು ಬೋಗಿಗಳ ಜೋಡಿಸುವಾಗ ಸಂಭವಿಸಿದ ಅಪಘಾತದಿಂದಾಗಿ ರೈಲ್ವೆ ಪೋರ್ಟರ್ ಒಬ್ಬರು ಮೃತಪಟ್ಟಿರುವ ಘಟನೆ ಬಿಹಾರದ ಗುಸರಾಯ್‌ನ ಬರೌನಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ. ಮೃತನನ್ನು ಅಮರ್ ಕುಮಾರ್ ರಾವ್ ಎಂದು ಗುರುತಿಸಲಾಗಿದೆ. ಈತ ಸೊನಾಪುರ ರೈಲ್ವೆ ವಲಯ ವ್ಯಾಪ್ತಿಯ ನಿಲ್ದಾಣದಲ್ಲಿ ಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಲಕ್ನೋ-ಬರೌನಿ ಎಕ್ಸ್‌ಪ್ರೆಸ್ (ಸಂಖ್ಯೆ: 15204) ಲಕ್ನೋ ಜಂಕ್ಷನ್‌ನಿಂದ ಆಗಮಿಸುತ್ತಿದ್ದಂತೆ ಬರೌನಿ ಜಂಕ್ಷನ್‌ನ 5 ನೇ ಪ್ಲಾಟ್‌ಫಾರ್ಮ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾವ್ ಸಾವನ್ನಪ್ಪಿದ್ದಾರೆ. ರೈಲಿನ ಬೋಗಿ ಜೋಡಿಸುವಾಗ ರೈಲಿನ ಇಂಜಿನ್ ಅನಿರೀಕ್ಷಿತವಾಗಿ ಹಿಮ್ಮುಖವಾಗಿ ಚಲಿಸಿದ್ದು, ಬೋಗಿಗಳ ನಡುವೆ ಅವರು ಸಿಲುಕಿ ನಜ್ಜುಗುಜ್ಜಾಗಿ ಸಾವನ್ನಪ್ಪಿರುವುದಾಗಿ ಮೂಲಗಳು ತಿಳಿಸಿವೆ.


ಈ ಭಯಾನಕ ಘಟನೆಯನ್ನು ನೋಡಿದ ಪ್ರಯಾಣಿಕರು ಕೂಗುತ್ತಿದ್ದಂತೆಯೇ, ರೈಲು ಚಾಲಕ ರೈಲಿನಿಂದ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಇಂಜಿನ್ ನ್ನು ಹಿಂದಕ್ಕೆ ಪಡೆಯಲು ಅಥವಾ ಅಪಘಾತ ತಡೆಯಲು ಯಾವುದೇ ಕ್ರಮ ಕೈಗೊಳ್ಳಲು ವಿಫಲವಾದ್ದರಿಂದ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಇಂಜಿನ್‌ನಿಂದ ರಾವ್ ನಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಈ ಅಪಘಾತದ ಭಯಾನಕ ದೃಶ್ಯಗಳನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಎರಡು ಬೋಗಿಗಳ ನಡುವೆ ರಾವ್ ಸಿಲುಕಿರುವುದು ಕಂಡುಬಂದಿದೆ. ಈ ಸಂಬಂಧ ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Comments


bottom of page