ಭತ್ತಕ್ಕೆ 2,300 ರೂ. ಬೆಂಬಲ ಬೆಳೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ
- new waves technology
- Oct 28, 2024
- 1 min read
ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಟಾದ್ ಜೋಶಿ ಸುದ್ದಿಗೋಷ್ಠಿಯಲ್ಲಿಂದು ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು. 2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ರೂ.1,310 ಇದ್ದು, ಈಗ ಅದನ್ನು 2,300 ರೂಪಾಯಿಗೆ ಹೆಚ್ಚಿಸಲಾಗಿದೆ. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದರು.ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 ಐಒಖಿ ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ.
ಭತ್ತದ ಗದ್ದೆಯಿಂದ 'ಗ್ಲೋಬಲ್ ಸಲ್ಯೂಷನ್ಸ್' ವರೆಗೆ ಕೇರಳ ಯುವಕನ ಸಾಧನೆಯ ಹಾದಿ!
ನಾಮನಿರ್ದೇಶನದ ಆಧಾರದ ಮೇಲೆ ಅಘಅ/ಖಘಅ ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಶೇಖರಣೆಗೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ ಕಇಉ ಯೋಜನೆಯಡಿ 31 ಐಒಖಿ ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್‌ಲೈನ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲಾದ ಜೋಶಿ ತಿಳಿಸಿದರು.
Commentaires