ಭ್ರಷ್ಠಾಚಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಲು ಯಾರ ಬಳಿ 'Fact Check' ಮಾಡಿಸಿದ್ದೀರಿ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
- new waves technology
- Nov 11, 2024
- 1 min read
ಬೆಂಗಳೂರು: ಅಮಾನತುಗೊಂಡ ಭ್ರಷ್ಠಾಚಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಲು ಯಾರ ಬಳಿ "Fact Check" ಮಾಡಿಸಿದ್ದೀರಿ?

ನಿಮ್ಮ ಪಾಲೆಷ್ಟು? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಯಚೂರು ಜಿಲ್ಲೆಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಂಡ PDO ಅಧಿಕಾರಿಗಳನ್ನು ಕಾನೂನು ಕ್ರಮ ಕೈಗೊಳ್ಳದೇ, ಯಾದಗಿರಿ ಜಿಲ್ಲೆಗೆ ವರ್ಗಾಯಿಸಿರುವುದು ಸ್ವತಃ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವಂತಾಗಿದೆ ಎಂದು ಗುಡುಗಿದ್ದಾರೆ.
ಮಾನ್ಯ ಪ್ರಿಯಾಂಕ್ ಖರ್ಗೆ ಅವರು ಭ್ರಷ್ಟಾಚಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಅವರ ಭ್ರಷ್ಠಾಚಾರ ಕೃತ್ಯವನ್ನು ಮರೆಮಾಚುವ ನಿಟ್ಟಿನಲ್ಲಿ ಮಾಡಿದ ಈ ವರ್ಗಾವಣೆ, ಸಿದ್ಧರಾಮಯ್ಯ ಸರ್ಕಾರದ ನಿಲುವಿನ ಮೇಲೆ ಸಂಶಯ ಹುಟ್ಟಿಸುತ್ತಿದೆ ಎಂದಿದ್ದಾರೆ.
ಸಾಮಾನ್ಯ ಜನರಿಗೆ ನ್ಯಾಯ ಸಿಗಬೇಕಾದರೆ, ಭ್ರಷ್ಟ ಅಧಿಕಾರಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸುವುದು ಮುಖ್ಯ. ಆದರೆ ಸರ್ಕಾರವೇ ಇಂತಹ ಆಪಾದಿತ ಅಧಿಕಾರಿಗಳಿಗೆ ರಕ್ಷಣೆ ನೀಡಿದಂತಾಗಿದ್ದು, ಭ್ರಷ್ಟಾಚಾರಿಗಳಿಗೆ ಖುದ್ದು ಪ್ರೋತ್ಸಾಹ ನೀಡುತ್ತಿರುವಂತಾಗಿದೆ ಎಂದು ಕಿಡಿಕಾರಿದ್ದಾರೆ.
ಅಮಾನತುಗೊಂಡ ಭ್ರಷ್ಠಾಚಾರಿಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆಗೊಳಿಸಲು ಯಾರ ಬಳಿ "Fact Check" ಮಾಡಿಸಿದ್ದೀರಿ, ಮತ್ತು ಈ ಭ್ರಷ್ಟಾಚಾರದಲ್ಲಿ ನಿಮ್ಮ ಪಾಲೆಷ್ಟು ಮಾನ್ಯ ಪ್ರಿಯಾಂಕ್ ಖರ್ಗೆ ಅವರೇ? ಎಂದು ಕೇಳಿದ್ದಾರೆ.
Comments