ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‌ಬೋಟ್ ಡಿಕ್ಕಿ; 2 ಸಾವು, 75 ಮಂದಿ ರಕ್ಷಣೆ!
- new waves technology
- Dec 18, 2024
- 1 min read
ಅಪಘಾತ ಸಂಭವಿಸುವ ಕೆಲವೇ ಕ್ಷಣಗಳ ಮುಂಚೆ ಸೆರೆಹಿಡಿದ ದೃಶ್ಯಗಳಲ್ಲಿ 6-7 ಪ್ರಯಾಣಿಕರಿದ್ದ ಸ್ಪೀಡ್ ಬೋಟ್ ಚಲಾಯಿಸಲಾಗುತ್ತಿತ್ತು. ಆದರೆ, ಅತಿವೇಗದ ಸ್ಪೀಡ್ ಬೋಟ್ ಯು-ಟರ್ನ್ ತೆಗೆದುಕೊಂಡು ಹಡಗಿನ ಸಮೀಪಕ್ಕೆ ಬಂದು ಬಲವಾಗಿ ಡಿಕ್ಕಿ ಹೊಡೆದಿದೆ.

ಮುಂಬೈ: ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‌ಬೋಟ್ ಡಿಕ್ಕಿ ಹೊಡೆದಿದ್ದು ಇಬ್ಬರು ಮೃತಪಟ್ಟಿದ್ದು 75 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬ್ಬಂದಿ ಸೇರಿದಂತೆ ಸುಮಾರು 85 ಪ್ರವಾಸಿಗರನ್ನು ಹೊತ್ತ ದೋಣಿಯು ಐಕಾನಿಕ್ ಗೇಟ್‌ವೇ ಆಫ್ ಇಂಡಿಯಾದಿಂದ ಯುನೆಸ್ಕೋ ಪರಂಪರೆಯ ಎಲಿಫೆಂಟಾ ದ್ವೀಪಕ್ಕೆ ತೆರಳುತ್ತಿದ್ದಾಗ ಸಂಜೆ 5.15ರ ಸುಮಾರಿಗೆ ಈ ಘಟನೆ ನಡೆದಿದೆ.
ಜಾಯಿಂಟ್ ಆಪರೇಷನ್ ಕಮಾಂಡ್ (ಜೆಒಸಿ) ಮತ್ತು ಬಿಎಂಸಿ ಪ್ರಕಾರ, ಕಾರಂಜಾದ ಉರಾನ್ ಬಳಿ ದೋಣಿ 'ನೀಲ್ಕಮಲ್' ದೋಣಿಗೆ ಸ್ಪೀಡ್ ಬೋಟ್ ಹೊಡೆದಿದೆ. ಇತರ ದೋಣಿಗಳಿಂದ ಪ್ರಯಾಣಿಕರು ಕ್ಲಿಕ್ ಮಾಡಿದ ಅಪಘಾತದ ವೀಡಿಯೊಗಳಲ್ಲಿ, ಜನರು ಸಹಾಯಕ್ಕಾಗಿ ಪ್ರಯತ್ನಿಸುವುದನ್ನು ಕಾಣಬಹುದು. ಸದ್ಯ 80 ಮಂದಿಯನ್ನು ರಕ್ಷಿಸಲಾಗಿದ್ದು ಐವರು ನಾಪತ್ತೆಯಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆದ ಭಾರತೀಯ ನೌಕಾಪಡೆಯ ನಾಲ್ಕು ಹೆಲಿಕಾಪ್ಟರ್‌ಗಳು, ಮೆರೈನ್ ಪೊಲೀಸ್, ಇಂಡಿಯನ್ ಕೋಸ್ಟ್ ಗಾರ್ಡ್, ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರ, ಸ್ಥಳೀಯ ಮೀನುಗಾರರು ಮತ್ತು ಇತರ ದೋಣಿಗಳು ಪ್ರವಾಸಿಗರನ್ನು ರಕ್ಷಿಸಲು ಭಾರಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಅಪಘಾತ ಸಂಭವಿಸುವ ಕೆಲವೇ ಕ್ಷಣಗಳ ಮುಂಚೆ ಸೆರೆಹಿಡಿದ ದೃಶ್ಯಗಳಲ್ಲಿ 6-7 ಪ್ರಯಾಣಿಕರಿದ್ದ ಸ್ಪೀಡ್ ಬೋಟ್ ಚಲಾಯಿಸಲಾಗುತ್ತಿತ್ತು. ಆದರೆ, ಅತಿವೇಗದ ಸ್ಪೀಡ್ ಬೋಟ್ ಯು-ಟರ್ನ್ ತೆಗೆದುಕೊಂಡು ಹಡಗಿನ ಸಮೀಪಕ್ಕೆ ಬಂದು ಬಲವಾಗಿ ಡಿಕ್ಕಿ ಹೊಡೆದಿದೆ. ಸದ್ಯ ಐವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇನ್ನು ಐವರ ನಾಪತ್ತೆಯಾಗಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಎಲಿಫೆಂಟಾ ದ್ವೀಪವು ಭಗವಾನ್ ಶಿವ ಮತ್ತು ಇತರ ಹಿಂದೂ ದೇವತೆಗಳಿಗೆ ಸಮರ್ಪಿತವಾದ ವಿಶ್ವಪ್ರಸಿದ್ಧ ದೇವಾಲಯಗಳ ಗುಂಪಾಗಿದೆ, ಇದನ್ನು 1,500-2,200 ವರ್ಷಗಳ ಹಿಂದೆ ಬಂಡೆಯಿಂದ ಕೆತ್ತಲಾಗಿದೆ ಎಂದು ಹೇಳಲಾಗುತ್ತದೆ ಮತ್ತು ಇದು ಮಹಾರಾಷ್ಟ್ರದಲ್ಲಿ ನೋಡಲೇಬೇಕಾದ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ.
Comentarios