top of page

ಮುಸ್ಲಿಂರನ್ನು ಬೇಟೆಯಾಡಿ ಕೊಲ್ಲುವ ಕಾಲ ಬರುತ್ತೆ: ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಕೆಎಸ್ ಈಶ್ವರಪ್ಪ ವಿರುದ್ಧ FIR

  • Writer: new waves technology
    new waves technology
  • Nov 15, 2024
  • 1 min read

ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ವಕ್ಫ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.










ಶಿವಮೊಗ್ಗ: ಕಾಂಗ್ರೆಸ್ ವಿರುದ್ಧ 'ಇಸ್ಲಾಮೀಕರಣ' ಆರೋಪ ಮತ್ತು ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಮತ್ತು ಮುಸ್ಲಿಂರನ್ನು ರಸ್ತೆಯಲ್ಲಿ ಹುಡುಕಿ ಹುಡುಕಿ ಕೊಲ್ಲುವ ಕಾಲ ಬರುತ್ತದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್​ ವಿಚಾರವಾಗಿ ಮುಸ್ಲಿಮರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ವಕ್ಫ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಕೃಷಿ ಭೂಮಿ, ದೇವಸ್ಥಾನ, ಮಠಗಳು, ಪುರಾತತ್ವ ಇಲಾಖೆಯ ಅಧೀನದಲ್ಲಿರುವ ಶಾಲಾ ಕಾಲೇಜುಗಳ ಆಸ್ತಿಗಳನ್ನೂ ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸಲಾಗಿದೆ. ಸರ್.ಎಂ ವಿಶ್ವೇಶ್ವರಯ್ಯನವರು ಹುಟ್ಟಿದ ಹಳ್ಳಿಯನ್ನೂ ಅವರು ಬಿಟ್ಟಿಲ್ಲ. ಮುಸ್ಲಿಂ ಮುಖಂಡರೊಬ್ಬರು ಅಂಬೇಡ್ಕರ್ ಅವರ ಹೆಸರನ್ನು ಬಳಸುತ್ತಿದ್ದಾರೆ. ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ಸಿದ್ಧತೆ ನಡೆಸಿದ್ದು, ಅಂಬೇಡ್ಕರ್ ಅವರನ್ನು ಅವಮಾನಿಸಿದರೂ ಕಾಂಗ್ರೆಸ್ ಸರಕಾರ ಇಸ್ಲಾಮೀಕರಣವನ್ನು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ಘೋಷಿಸಲು ಮುಂದಾಗಿದ್ದಾರೆ. ಹಿಂದೂಸ್ತಾನವನ್ನು ಪಾಕಿಸ್ತಾನವನ್ನಾಗಿ ಮಾಡಲು ಹವಣಿಸುತ್ತಿದ್ದಾರಾ? ಹೀಗೆಯೇ ಮುಂದುವರಿದರೆ ಸಂತರು, ಋಷಿಮುನಿಗಳ ನೇತೃತ್ವದಲ್ಲಿ ಗಲಭೆಗಳು ಭುಗಿಲೇಳುವ ಕಾಲ ಬರಲಿದೆ. ಕಾಂಗ್ರೆಸ್ ನಾಯಕರನ್ನು ಬೇಟೆಯಾಡಿ ಕೊಲ್ಲುವ ದಿನಗಳು ಬಂದರೆ ಆಶ್ಚರ್ಯವಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ವಕ್ಫ್ ವಿಚಾರ ಪ್ರಸ್ತಾಪ: BJP ಶಾಸಕ ಯತ್ನಾಳ್'ಗೆ ಸಾರ್ವಜನಿಕರಿಂದ ತರಾಟೆ; Video

ಈ ಹೇಳಿಕೆಗಳು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಈಶ್ವರಪ್ಪ ಅವರು ಒಂದು ಸಮುದಾಯ ಮತ್ತು ರಾಜಕೀಯ ಪಕ್ಷದ ವಿರುದ್ಧ ದ್ವೇಷವನ್ನು ಹುಟ್ಟುಹಾಕುವ ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದು, ಆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಒತ್ತಾಯಿಸಿದರು.

Comentarios


bottom of page