top of page

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ನಾಳೆ ಪ್ರಕಟ

  • Writer: new waves technology
    new waves technology
  • Dec 12, 2024
  • 1 min read

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರೆಗ್ಯುಲರ್‌ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿಯ ತೀರ್ಪುನ್ನು ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ ಪ್ರಕಟವಾಗಲಿದೆ.

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರೆಗ್ಯುಲರ್‌ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದು, ಎಸ್ ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದ್ದಾರೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದರು. ಜೊತೆಗೆ​ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದರು.


ಇದೀಗ ನಾಳೆ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಲಿದ್ದು, ದರ್ಶನ್​ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂಬುದು ತಿಳಿಯಲಿದೆ.

Comments


bottom of page