top of page

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಹೈಕೋರ್ಟ್‌; ವರದಿ ಸಲ್ಲಿಕೆಗೆ 3 ತಿಂಗಳ ಗಡುವು!

  • Writer: new waves technology
    new waves technology
  • Dec 4, 2024
  • 1 min read

ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣ ಎಸ್‌ಐಟಿ ಆರಂಭಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳು ಎಸ್‌ಐಟಿಗೆ ಒದಗಿಸಬೇಕು. ಅಗತ್ಯಬಿದ್ದರೆ ಇತರೆ ಪೊಲೀಸ್‌ ಅಧಿಕಾರಿಗಳನ್ನು ಎಸ್‌ಐಟಿಯು ನೆರವಿಗೆ ಪಡೆಯಬಹುದು.










ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣದ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದ ವಕೀಲೆ ಎಸ್‌ ಜೀವಾ ಪ್ರಕರಣದ ತನಿಖೆಗೆ ಹೈಕೋರ್ಟ್ ಮೂವರು ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಸಿಬಿಐ) ರಚಿಸಿದ್ದು, ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಗಡುವು ನೀಡಿದೆ.

ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಾಗೂ ತಮ್ಮ ವಿರುದ್ಧ ಬನಶಂಕರಿ ಠಾಣೆಯಲ್ಲಿ ದಾಖಲಾಗಿರುವ ಬಿಎನ್‌ಎಸ್‌ ಸೆಕ್ಷನ್‌ 108 ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17(ಎ) ಅಡಿ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಡಿವೈಎಸ್‌ಪಿ ಬಿಎಂ ಕನಕಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ.


ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ ನೇತೃತ್ವದ ಮೂರು ಅಧಿಕಾರಿಗಳ ವಿಶೇಷ ತನಿಖಾ ತಂಡ ನಡೆಸಲಿದೆ. ಕರ್ನಾಟಕ ಹೋಮ್‌ ಗಾರ್ಡ್‌ನ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಅಕ್ಷಯ್‌ ಮಚೀಂದ್ರ ಹಾಕೆ, ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಅವರು ಎಸ್‌ಐಟಿಯ ಇನ್ನಿಬ್ಬರು ಸದಸ್ಯರಾಗಿರಲಿದ್ದಾರೆ ಎಂದು ನ್ಯಾಯಾಲಯ ಆದೇಶಿಸಿದೆ.

]

ಭೋವಿ ಹಗರಣದ ಪ್ರಕರಣದ ಆರೋಪಿಯೊಬ್ಬರಿಂದ ಕನಕಲಕ್ಷ್ಮಿ ಅವರು 25 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ. ಇದನ್ನು ಹೊರತುಪಡಿಸಿ ಬೇರಾವುದೇ ದಾಖಲೆಯಿಲ್ಲ. ಬಿಎನ್‌ಎಸ್‌ ಸೆಕ್ಷನ್‌ 108 (ಐಪಿಸಿ ಸೆಕ್ಷನ್‌ 306) ಅಡಿ ಎಸ್‌ಐಟಿ ತನಿಖೆ ಮಾಡುವಾಗ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಗಮನಕ್ಕೆ ಬಂದರೆ ಭ್ರಷ್ಟಾಚಾರ ಪ್ರತಿಬಂಧ ಕಾಯಿದೆ ಸೆಕ್ಷನ್‌ 17ಎ ಅಡಿ ಕಾನೂನಿನ ಅನ್ವಯ ತನಿಖೆ ನಡೆಸಬೇಕು ಎಂದೂ ನ್ಯಾಯಾಲಯವು ಆದೇಶಿಸಿದೆ.

ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣ ಎಸ್‌ಐಟಿ ಆರಂಭಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳು ಎಸ್‌ಐಟಿಗೆ ಒದಗಿಸಬೇಕು. ಅಗತ್ಯಬಿದ್ದರೆ ಇತರೆ ಪೊಲೀಸ್‌ ಅಧಿಕಾರಿಗಳನ್ನು ಎಸ್‌ಐಟಿಯು ನೆರವಿಗೆ ಪಡೆಯಬಹುದು. ತನಿಖೆ ಆರಂಭವಾದಗಿನಿಂದ ಮೂರು ತಿಂಗಳಲ್ಲಿ ತನಿಖೆ ಮುಗಿಯಬೇಕು. ತನಿಖಾ ವರದಿಯನ್ನು ಮೂರು ತಿಂಗಳು ಅಥವಾ ಅದರ ಒಳಗೆ ಈ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಎಸ್‌ಐಟಿಗೆ ಅಗತ್ಯವಾದ ಕಚೇರಿ ಮತ್ತಿತರ ಸೌಲಭ್ಯವನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

Comments


bottom of page