ವಿಧಾನ ಮಂಡಲ ಚಳಿಗಾಲ ಅಧಿವೇಶನ: ಬಿಜೆಪಿ, ಕಾಂಗ್ರೆಸ್ ನಲ್ಲಿ ಬಣ ರಾಜಕೀಯಕ್ಕೆ ಸದ್ಯಕ್ಕೆ ವಿರಾಮ
- new waves technology
- Dec 9, 2024
- 2 min read
ವಿವಿಧ ಭ್ರಷ್ಟಾಚಾರ ಆರೋಪ, ವಕ್ಫ್ ಭೂ ವಿಚಾರ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಿಗೆ ಕಾಂಗ್ರೆಸ್ ಪ್ರತ್ಯುತ್ತರ ನೀಡಬೇಕಾಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಬೀಳುವ ನಿರೀಕ್ಷೆಯಿದೆ.

ಬೆಂಗಳೂರು: ಇಂದು ಸೋಮವಾರ ಡಿಸೆಂಬರ್ 9ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿರುವುದರಿಂದ ಸದ್ಯಕ್ಕೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯಲ್ಲಿನ ಗುಂಪುಗಾರಿಕೆ ಮತ್ತು ಅಧಿಕಾರ ರಾಜಕಾರಣಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
ವಿವಿಧ ಭ್ರಷ್ಟಾಚಾರ ಆರೋಪ, ವಕ್ಫ್ ಭೂ ವಿಚಾರ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಿಗೆ ಕಾಂಗ್ರೆಸ್ ಪ್ರತ್ಯುತ್ತರ ನೀಡಬೇಕಾಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಬೀಳುವ ನಿರೀಕ್ಷೆಯಿದೆ.
ಕಳೆದ ವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡೂವರೆ ವರ್ಷಗಳ ನಂತರ ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಒಪ್ಪಂದವಾಗಿದೆ ಎಂದು ಹೇಳಿದ್ದರು. ಆದರೆ ಅಂತಹ ಯಾವುದೇ ಒಡಂಬಡಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಶಿವಕುಮಾರ್ ವ್ಯಂಗ್ಯವಾಗಿಯಾದರೂ ಸಿಎಂ ಮಾತಿಗೆ ಒಪ್ಪಿಗೆ ಸೂಚಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಕೂಡ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ನಾಯಕರು ಈ ಬಗ್ಗೆ ಚರ್ಚೆ ಬೇಡ ಎಂದು ನಂತರ ಡಿ ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಆದರೆ, ಮತ್ತೋರ್ವ ದಲಿತ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪಲ್ ಅವರು ಅಧಿಕಾರ ಹಂಚಿಕೆಯಲ್ಲಿ ಒಪ್ಪಂದವಾಗಿದೆ ಎಂದು ಹೇಳಿದ್ದರು.
ಈಗ ಕನಿಷ್ಠ ಮುಂದಿನ 10 ದಿನಗಳ ಕಾಲ, ವಿರೋಧ ಪಕ್ಷಗಳ ಆರೋಪಗಳನ್ನು ಎದುರಿಸುವ ಕೆಲಸವನ್ನು ಮಂತ್ರಿಗಳು ಹೊಂದಿರುವುದರಿಂದ ಸಿಎಂ ಬದಲಾವಣೆ ವಿಷಯ ಬದಿಗೆ ಸರಿಯಬಹುದು. ಬಿಜೆಪಿ ಪಾಳಯದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ ಸರ್ಕಾರವನ್ನು ಮೂಲೆಗುಂಪು ಮಾಡಲು ವಿವಿಧ ಗುಂಪುಗಳೊಂದಿಗೆ ಗುರುತಿಸಿಕೊಂಡಿರುವ ಎಲ್ಲಾ ಶಾಸಕರನ್ನು ಒಮ್ಮತದಿಂದ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ.
ಬಿಜೆಪಿಯಲ್ಲಿನ ಗುಂಪುಗಾರಿಕೆ ವಿಚಾರದಲ್ಲಿ ಆರ್ ಅಶೋಕ್ ಅವರು ತಟಸ್ಥ ನಿಲುವು ಹೊಂದಲು ಬಯಸುತ್ತಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ತೀವ್ರ ಟೀಕಾಕಾರರಾಗಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ವಿಜಯೇಂದ್ರ ವಿರುದ್ಧ ಹರಿಹಾಯ್ದ ಯತ್ನಾಳ್ ಅವರನ್ನು ಶಾಂತಗೊಳಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಮಸ್ಯೆಗಳತ್ತ ಗಮನ ಹರಿಸಲು ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ಸದ್ಯ ಗಮನಹರಿಸುತ್ತಿದ್ದಾರೆ.
ಬಿಜೆಪಿ ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಗೆ ಕರೆ ನೀಡಿದೆ. ಪರಿಷತ್ತಿನಲ್ಲಿ ಛಲವಾದಿ ನಾರಾಯಣಸ್ವಾಮಿ ಮತ್ತು ಹಿರಿಯ ಮುಖಂಡ ಸಿ.ಟಿ.ರವಿ ಅವರು ಹಲವು ಪ್ರಮುಖ ವಿಚಾರಗಳಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆಯಿದೆ.
ಜೆಡಿಎಸ್‌ಎಲ್‌ಪಿ ನಾಯಕ ಸಿಬಿ ಸುರೇಶ್ ಬಾಬು ಅವರು ಮೈತ್ರಿ ಪಾಲುದಾರ ಬಿಜೆಪಿಗೆ ಬೆಂಬಲ ನೀಡುವ ನಿರೀಕ್ಷೆಯಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಸೇರಿದಂತೆ ಹಲವು ವಿಷಯಗಳಲ್ಲಿ ಚಾಮುಂಡೇಶ್ವರಿ ಶಾಸಕ ಹಾಗೂ ಜೆಡಿಎಸ್‌ನ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ಎನ್‌ಡಿಎಗೆ ಬೆಂಬಲ ನೀಡಲಿದ್ದಾರೆಯೇ ಎಂಬುದು ಕುತೂಹಲಕಾರಿಯಾಗಿದೆ. ಬಿಜೆಪಿಯ ಭಿನ್ನಮತೀಯ ಶಾಸಕರಾದ ಎಸ್‌ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಕೇಸರಿ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ.
Comentarios