ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ
- new waves technology
- Feb 18
- 1 min read
4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಇದರಲ್ಲಿ ಒಟ್ಟು 329 ಚೀಲಗಳಲಿದ್ದ 8 ಟನ್ ಆಹಾರ ಪದಾರ್ಥ ವಶ

ಹುಬ್ಬಳ್ಳಿ: ಅಂಗನವಾಡಿ ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪ ಸಂಬಂಧ 18 ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಇದರಲ್ಲಿ ಒಟ್ಟು 329 ಚೀಲಗಳಲಿದ್ದ 8 ಟನ್ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಬಂಧಿತರನ್ನು ಧಾರವಾಡದ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದಗೌಸ್ ಖಲೀಪಾ, ಗೌತಮಸಿಂಗ ಠಾಕೂರ್, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದಂತೆ 18 ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.
ಆಹಾರ ಪದಾರ್ಥಗಳ ಅಕ್ರಮ ಸಂಗ್ರಹ ಹಾಗೂ ಮಾರಾಟ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದಾಗ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದರು.
コメント