top of page

4,071 ಕೋಟಿ ರೂ. ಹೂಡಿಕೆಯ 88 ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ, 10,585 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ್

  • Writer: new waves technology
    new waves technology
  • Oct 25, 2024
  • 1 min read

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಯಿತು.











ಬೆಂಗಳೂರು: 4071.11 ಕೋಟಿ ರೂಪಾಯಿ ಹೂಡಿಕೆಯ 88 ಯೋಜನೆಗಳಿಗೆ ಅನುಮೋದನೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶುಕ್ರವಾರ ಹೇಳಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಯಿತು.

ಸಭೆ ಕುರಿತು ಮಾಹಿತಿ ನೀಡಿದ ಸಚಿವರು. ಸಭೆಯಲ್ಲಿ ಆನೇಕಲ್‌ನ ವೀರಸಂದ್ರ ಗ್ರಾಮದಲ್ಲಿ 485 ಕೋಟಿ ರೂ. ಹೂಡಿಕೆಯೊಂದಿಗೆ 1,000 ಮಂದಿಗೆ ಐಟಿ ಮತ್ತು ಐಟಿಇಎಸ್‌ ಕ್ಷೇತ್ರದಲ್ಲಿ ಉದ್ಯೋಗ ನೀಡುವ ಅರಾಟ್‌ ಒನ್‌ ವರ್ಲ್ಡ್‌ ಪ್ರೈ.ಲಿ., (ಈ ಹಿಂದಿನ ಆರ್‌ಜಿಆರ್‌ ಟೆಕ್‌ಪಾರ್ಕ್‌ ಪ್ರೈ.ಲಿ.) ಕಂಪನಿಗೆ ಅನುಮತಿ ನೀಡಲಾಗಿದೆ. ಡೇರಿ ಕ್ಲಾಸಿಕ್ ಐಸ್ ಕ್ರೀಂ ಸಂಸ್ಥೆಯು, ಕಲಬುರಗಿ ಜಿಲ್ಲೆಯ ನಂದೂರು ಕಾಸರಟಗಿ ಕೈಗಾರಿಕಾ ಪ್ರದೇಶದಲ್ಲಿ ₹285 ಕೋಟಿ ವೆಚ್ಚದಲ್ಲಿ ಐಸ್ ಕ್ರೀಂ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು ಇದರಿಂದ 900 ಜನರಿಗೆ ಉದ್ಯೋಗ ಸಿಗಲಿದೆ. ಫ್ರೋಜನ್ ಡೆಸರ್ಟ್, ಕುಲ್ಫಿ ಇತ್ಯಾದಿ ಕೋಲ್ಡ್ ಸ್ಟೋರೇಜ್ ಸಹಿತ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಎಂಬಿ ಪಾಟೀಲ್


ರೂ.50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡಲಿರುವ 14 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ರೂ.2,031.76 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಇದರಿಂದ 3,302 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ. ರೂ.15 ಕೋಟಿಯಿಂದ ರೂ.50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 68 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ರೂ.1,355.07 ಕೋಟಿ ಬಂಡವಾಳ ಹರಿದುಬರಲಿದೆ. ಅಲ್ಲದೆ, 5,049 ಜನರಿಗೆ ಉದ್ಯೋಗವಕಾಶ ಸಿಗಲಿದೆ ಎಂದು ಹೇಳಿದರು.

ಹೆಚ್ಚುವರಿ ಬಂಡವಾಳ ಹೂಡಿಕೆಯ 6 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ ರೂ.684.28 ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಿದೆ. ಇದರಿಂದ ಅಂದಾಜು 2,234 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

Comentários


bottom of page