top of page

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ

  • Writer: new waves technology
    new waves technology
  • Sep 4
  • 1 min read

ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. "ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ

ree

ನವದೆಹಲಿ: ದೇಶದ ಅರ್ಥ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯಲ್ಲಿ, ಜಿಎಸ್‌ಟಿ ಕೌನ್ಸಿಲ್ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದೆ.

ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. "ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ. ಕೇವಲ ಎರಡು ಸ್ಲ್ಯಾಬ್‌ಗಳು ಇನ್ನು ಮುಂದೆ ಇರುತ್ತವೆ. ಪರಿಹಾರ ಸೆಸ್‌ನ ಸಮಸ್ಯೆಗಳನ್ನು ಸಹ ಪರಿಹರಿಸುತ್ತಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 56 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರ ಘೋಷಿಸಿದರು.

ತೆರಿಗೆಯಲ್ಲಿನ ಈ ಸುಧಾರಣೆ ಕ್ರಮಗಳನ್ನು ಸಾಮಾನ್ಯ ಜನರನ್ನು ಕೇಂದ್ರೀಕರಿಸಿ ಕೈಗೊಳ್ಳಲಾಗಿದೆ. ಸಾಮಾನ್ಯ ಜನರ ದೈನಂದಿನ ಬಳಕೆಯ ವಸ್ತುಗಳ ಮೇಲಿನ ಪ್ರತಿಯೊಂದು ತೆರಿಗೆಯನ್ನು ಕಠಿಣ ಪರಿಶೀಲನೆಗೆ ಒಳಪಡಿಸಲಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ದರಗಳು ತೀವ್ರವಾಗಿ ಕಡಿಮೆಯಾಗಿದೆ. ಕಾರ್ಮಿಕ-ತೀವ್ರ ಕೈಗಾರಿಕೆಗಳಿಗೆ ಉತ್ತಮ ಬೆಂಬಲ ನೀಡಲಾಗಿದೆ. ರೈತರು ಮತ್ತು ಕೃಷಿ ವಲಯ ಹಾಗೂ ಆರೋಗ್ಯ ವಲಯವು ಪ್ರಯೋಜನ ಪಡೆಯುತ್ತದೆ. ಆರ್ಥಿಕತೆಯ ಪ್ರಮುಖ ಚಾಲಕರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು

Comments


bottom of page