top of page

Air India Plane Crash: ಪತನಗೊಂಡ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

  • Writer: new waves technology
    new waves technology
  • Jun 13
  • 1 min read

ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ.

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ.

ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ.

ಮೂಲಗಳ ಪ್ರಕಾರ, ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ದ ತಂಡ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಜನದಟ್ಟಣೆಯ ಮೇಘನಿನಗರ ಪ್ರದೇಶದಲ್ಲಿ ಒಂದು ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿದೆ. ಇಲ್ಲಿಯೇ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ ಪತನಗೊಂಡಿತ್ತು.

ಆದಾಗ್ಯೂ ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿರುವ ಬಗ್ಗೆ ವಿಮಾನಯಾನ ಸಂಸ್ಥೆ ಇನ್ನೂ ದೃಢಪಡಿಸಿಲ್ಲ.

ಬ್ಲ್ಯಾಕ್ ಬಾಕ್ಸ್ ವಿಮಾನ ಹಾರಾಟದ ಸಮಯದಲ್ಲಿ ವಿಮಾನದ ಬಗ್ಗೆ ಮಾಹಿತಿಯನ್ನು ದಾಖಲಿಸುವ ಒಂದು ಸಣ್ಣ ಸಾಧನವಾಗಿದೆ. ಇದು ವಿಮಾನ ಅಪಘಾತಗಳ ತನಿಖೆಗೆ ಸಹಾಯ ಮಾಡುತ್ತದೆ.

ಈ ಕಪ್ಪು ಪೆಟ್ಟಿಗೆಯು ಅಹಮದಾಬಾದ್ ಬಳಿ 241 ಜನರ ಸಾವಿಗೆ ಕಾರಣವಾದ ನಿಗೂಢ ಅಪಘಾತದ ಬಗ್ಗೆ ಪ್ರಮುಖ ಸುಳಿವುಗಳನ್ನು ಹೊಂದಿದೆ ಎನ್ನಲಾಗುತ್ತಿದೆ.

ಅಪಘಾತಕ್ಕೆ ತಾಂತ್ರಿಕ ವೈಫಲ್ಯ, ಎಂಜಿನ್ ತೊಂದರೆ ಅಥವಾ ಮಾನವ ದೋಷ ಕಾರಣವಾಗಿದೆಯೇ ಎಂದು ನಿರ್ಧರಿಸಲು ತನಿಖಾಧಿಕಾರಿಗಳು ವಿಮಾನ ಮತ್ತು ಕಾಕ್ಪಿಟ್ ಡೇಟಾವನ್ನು ಡಿಕೋಡ್ ಮಾಡಲು ಪ್ರಯತ್ನಿಸುತ್ತಿದ್ದಾರೆ.

230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮೇಘನಿನಗರದ ಬಿಜೆ ವೈದ್ಯಕೀಯ ಕಾಲೇಜಿನ ಸಂಕೀರ್ಣಕ್ಕೆ ಅಪ್ಪಳಿಸಿತ್ತು. ದುರಂತದಲ್ಲಿ 265 ಜನ ಸಾವನ್ನಪ್ಪಿದ್ದಾರೆ.

Comments


bottom of page