top of page

BIG NEWS : ಸ್ನೇಹಮಯಿ ಕೃಷ್ಣ ಸುಳ್ಳು ಆರೋಪ ಮಾಡುತ್ತಿದ್ದಾರೆ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

  • Writer: new waves technology
    new waves technology
  • Nov 11, 2024
  • 1 min read

ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬರಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.












ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸೈಟ್ ನೋಂದಣಿಗೆ ಚೆಕ್ ಮೂಲಕ ಹಣ ಕೊಟ್ಟಿದ್ದಾರ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಾನ ಪತ್ರ ಮಾಡೋಕೆ ನನ್ನ ಭಾಮೈದ ನೋಂದಣಿ ಶುಲ್ಕ ಪಾವತಿಸಿದ್ದ.ತಹಶೀಲ್ದಾರ್ ಉಪ ವಿಭಾಗಾಧಿಕಾರಿ ಯಾಕೆ ಶುಲ್ಕ ಪಾವತಿಸುತ್ತಾರೆ ಸುಮ್ಮನೆ ಏನೋ ಹೇಳುತ್ತಾರೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಸ್ನೇಹಮಯಿ ಕೃಷ್ಣ ಆರೋಪವೇನು?

ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಮುಡಾ ಪ್ರಕರಣದಲ್ಲಿ ತಮ್ಮ ಪ್ರಭಾವ ಬೀರಿಲ್ಲ ಎಂದು ಹೇಳುವ ಸಿದ್ದರಾಮಯ್ಯನವರಿಗೆ, ನಿಮ್ಮ ಪ್ರಭಾವ ಬೀರಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಕೊಡುತ್ತಿದ್ದೇನೆ ! ಕ್ರಯಪತ್ರ ನೊಂದಣಿ ಮಾಡಿಸಿಕೊಳ್ಳುವವರು ನೊಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ರವರು ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ.

ಆದರೆ ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿರವರ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಸೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ ! ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕ ? ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರಿಸುವರೆ? ಎಂದು ಪ್ರಶ್ನಿಸಿದ್ದಾರೆ.

Comments


bottom of page