top of page

BIG NEWS: ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ: ವಿಚಾರಣೆಗೆ ಆದೇಶ

  • Writer: new waves technology
    new waves technology
  • Nov 18, 2024
  • 1 min read

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ.

ree









ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಯಚೂರು, ಕಲಬುರಗಿಯಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಹಲವರು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರಿನ ಪರೀಕ್ಷಾ ಕೇಂದ್ರದಲ್ಲಿ ಅನೇಕ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ತಲುಪದಿರುವ ಬಗ್ಗೆ ವಿಚಾರಣೆಗೆ ಆದೇಶಿಸಲಾಗಿದೆ.

ಅಭ್ಯರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಶ್ನೆ ಪತ್ರಿಕೆ ವಿತರಿಸಿಲ್ಲ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ವಿಚಾರಣೆಗೆ ಆದೇಶಿಸಲಾಗಿದ್ದು, ಜಿಲ್ಲಾಡಳಿತದಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಎಸ್ಸಿ ಕಾರ್ಯದರ್ಶಿ ರಮಣದೀಪ್ ಚೌಧರಿ ತಿಳಿಸಿದ್ದಾರೆ.

Comments


bottom of page