top of page

BIG NEWS : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ : ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ

Writer: new waves technology
new waves technology
Nov 18, 2024
1 min read

ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯು ನಮ್ಮ ಶಾಸಕರಿಗೆ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ ನೀಡಿದ್ದಾರೆ.











ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿಕುಮಾರ್ ಗಣಿಗ, ನಮ್ಮ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ.

ಆಫರ್ ಬಂದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಮ್ಮ ಇಬ್ಬರು ಶಾಸಕರನ್ನು ಸಂಪರ್ಕಿಸಿ 100 ಕೋಟಿ ರೂ. ಆಫರ್ ನೀಡಲಾಗಿದೆ. ಶೀಘ್ರದಲ್ಲೇ ಆಫರೇಷನ್ ಕಮಲದ ಸಾಕ್ಷ್ಯ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಿತ್ತೂರು ಶಾಸಕ ಬಾಬು ಹಾಗೂ ಚಿಕ್ಕಮಗಳೂರು ಶಾಸಕರಿಗೆ 100 ಕೋಟಿ ರೂ. ಆಫರ್ ಮಾಡಲಾಗಿತ್ತು. ನಮ್ಮ ಪಕ್ಷದ ಶಾಸಕರನ್ನು ಬಿಜೆಪಿಯವರು ಎಲ್ಲಿ ಭೇಟಿ ಮಾಡಿದ್ದರು ಎನ್ನುವುದರ ಬಗ್ಗೆ ದಾಖಲೆ ಇವೆ. ಆಪರೇಷನ್ ಕಮಲದ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Comments


bottom of page