ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನ ಪಕ್ಷದಿಂದ ಉಚ್ಛಾಟಿಸಿ: ಪಾಕಿಸ್ತಾನದಲ್ಲಿ ಎಲೆಕ್ಷನ್‌ಗೆ ನಿಂತ್ರೆ 1 ಲಕ್ಷ ಅಂತರದಲ್ಲಿ ಸಿದ್ದು ಗೆಲುವು
- new waves technology
- Apr 30
- 1 min read
ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು.

ಬೆಂಗಳೂರು: ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ್, ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಎಲ್ಲರೂ ನಿಮ್ಮ ಜೊತೆಗಿದ್ದೀನಿ ಎಂದು ಹೇಳುವಾಗ ಸಿದ್ದರಾಮಯ್ಯ ನಿಮ್ಮ ಜೊತೆಗಿಲ್ಲ ಎನ್ನುತ್ತಾರೆ ಎಂದಿದ್ದಾರೆ.
ಶಾಂತಿದೂತ ಸಿದ್ದರಾಮಯ್ಯ ನಿನ್ನೆ ಪೊಲಿಸ್ ಅಧಿಕಾರಿ ಕಪಾಳಕ್ಕೆ ಹೊಡಿಯೋಕೆ ಹೋಗಿದ್ದರು, ಎಸ್ಪಿ ಇವರ ಮನೆ ಕಸ ಗುಡಿಸೊ ಆಳ?. ಡಿಸಿನ ಕತ್ ಹಿಡಿದು ತಳ್ಳೋದು, ಎಸ್ಪಿಗೆ ಏಕವಚನದಲ್ಲಿ ಮಾತಾಡೋದು. ಡಿಸಿ, ಅವರನ್ನೇ ಸ್ಟೇಜ್‌ನಿಂದ ತಳ್ತಾರೆ. ಸಿಎಂ ಆಗಿ ಬಹಳ ದಿನ ಇರಲ್ಲ. ನವಂಬರ್ ಲಾಸ್ಟ್, ಅದೇ ಒತ್ತಡದಲ್ಲಿ ಸಿಎಂ ಮಾತಾಡ್ತಿದಾರೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ನಡೆಗೆ ವಿರೋಧವಾಗಿದ್ದಾರೆ. ಪೊಲೀಸ್ ಇಲಾಖೆಗೆ ಸಿಎಂ ಅವಮಾನ ಮಾಡಿದ್ದಾರೆ. ಪೊಲೀಸ್ ಕುಟುಂಬಗಳಿಗೆ ನೋವಾಗಿದೆ ಎಂದು ಆರೋಪಿಸಿದರು. ಪೊಲಿಸರನ್ನ ಯಾರ್ ಬೇಕಾದ್ರು ಹೊಡಿಬಹುದು ಎಂಬ ಮೆಸೇಜ್ ಸಿಎಂ ಕೊಟ್ಟಿದಾರೆ ಎಂದರು.
ಬಿಜೆಪಿಯವರಿಗೆ ಒಂದು ಪ್ರತಿಭಟನೆ, ಸಭೆಗಳನ್ನು ಮಾಡೋಕೆ ಬಿಡಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯನವರನ್ನ ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ ಡಿಕೆ ಶಿವಕುಮಾರ್ ಅವರೇ? ಎಂದು ಪ್ರಶ್ನಿಸಿದ್ದಾರೆ.
ಉತ್ತರನ ಪೌರುಷ ಒಲೆಯ ಮುಂದೆ" ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತನಾ ಡಿಸಿಎಂ DK Shivakumar ಅವರೇ?
ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ @siddaramaiah ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ.
ನಿಮ್ಮ ಪಕ್ಷದ ಸರ್ವೋಚ್ಚ ನಾಯಕಿ ಪ್ರಧಾನಿ ಆಗಿದ್ದಾಗ ಕಪ್ಪು ಬಾವುಟ ತೋರಿಸಿದ್ದ ವ್ಯಕ್ತಿಯನ್ನ ಪಕ್ಷಕ್ಕೆ ಕರೆದುಕೊಂಡು ಬಂದು ಎರಡೆರಡು ಬಾರಿ ಮುಖ್ಯಮಂತ್ರಿ ಮಾಡಿ, ಅವರ ಋಣದಲ್ಲಿ ಅಧಿಕಾರ ಅನುಭವಿಸುತ್ತಿದ್ದೀರಲ್ಲ, @BJP4Karnataka ಮಾಡುವ ಪ್ರತಿಭಟನೆಗೆ ಧಮ್ಕಿ ಹಾಕುವ ಯಾವ ನೈತಿಕತೆ ಇದೆ ತಮಗೆ? ಎಂದು ಸವಾಲು ಹಾಕಿದ್ದಾರೆ.










Comments