top of page

BMTC ಟಿಕೆಟ್ ರಹಿತ ಪ್ರಯಾಣ, ಮಹಿಳಾ ಸೀಟುಗಳಲ್ಲಿ ಕುಳಿತವರಿಂದ 19 ಲಕ್ಷ ರೂ ದಂಡ ವಸೂಲಿ

  • Writer: new waves technology
    new waves technology
  • Nov 28, 2024
  • 1 min read

ಟಿಕೆಟ್ ಇಲ್ಲದೆ ಪ್ರಯಾಣಿಸುವ ಪ್ರಯಾಣಿಕರನ್ನು ಪತ್ತೆಹಚ್ಚಲು ಬಿಎಂಟಿಸಿಯ ತಪಾಸಣಾ ಸಿಬ್ಬಂದಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಬಸ್‌ಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.










ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯು ಕಳೆದ ಮೂರು ತಿಂಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಮತ್ತು ಮಹಿಳೆಯರಿಗೆ ಮಾತ್ರ ಮೀಸಲಾದ ಆಸನಗಳಲ್ಲಿ ಪ್ರಯಾಣಿಸಿದ 10,069 ಪ್ರಯಾಣಿಕರಿಂದ 19 ಲಕ್ಷ ರೂಪಾಯಿ ದಂಡವಾಗಿ ಸಂಗ್ರಹಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಟಿಕೆಟ್ ಇಲ್ಲದೆ ಪ್ರಯಾಣಿಸುವ ಪ್ರಯಾಣಿಕರನ್ನು ಪತ್ತೆಹಚ್ಚಲು ಬಿಎಂಟಿಸಿಯ ತಪಾಸಣಾ ಸಿಬ್ಬಂದಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಬಸ್‌ಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

BMTC ಪ್ರಕಾರ, ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ, ತಪಾಸಣಾ ಸಿಬ್ಬಂದಿ 57,219 ಟ್ರಿಪ್‌ಗಳನ್ನು ಪರಿಶೀಲಿಸಿದ್ದಾರೆ ಮತ್ತು 8,891 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡವಾಗಿ 17,96,030 ರೂ. ದಂಡ ವಿಧಿಸಿದ್ದಾರೆ ಮತ್ತು ಕರ್ತವ್ಯ ಲೋಪಕ್ಕಾಗಿ ಕಂಡಕ್ಟರ್‌ಗಳ ವಿರುದ್ಧ 5,268 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಅದೇ ಅವಧಿಯಲ್ಲಿ, ಅವರು ಮಹಿಳಾ ಪ್ರಯಾಣಿಕರಿಗೆ ಮೀಸಲಾದ ಸೀಟುಗಳನ್ನು ಆಕ್ರಮಿಸಿಕೊಂಡಿದ್ದಕ್ಕಾಗಿ 1,178 ಪುರುಷ ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ ಮತ್ತು 1988 ರ MV ಕಾಯಿದೆಯ KMV (ಕರ್ನಾಟಕ ಮೋಟಾರು ವಾಹನ) ನಿಯಮಗಳಿಗೆ ಅನುಸಾರವಾಗಿ 1,17,800 ರೂಪಾಯಿ ದಂಡ ಸಂಗ್ರಹಿಸಿದ್ದಾರೆ.

"ಒಟ್ಟಾರೆ, ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ, 10,069 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಮತ್ತು 19,13,830 ರೂ ದಂಡ ಸಂಗ್ರಹಿಸಲಾಗಿದೆ" ಎಂದು ಬಿಟಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

Comments


bottom of page