BREAKING: ಬೆಂಗಳೂರು ಮೇಲ್ಸೇತುವೆ ಮೇಲೆ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
- new waves technology
- Nov 12, 2024
- 1 min read
ಬೆಂಗಳೂರು: ಬೆಂಗಳೂರು ಏರ್ ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಬಿಎಂಟಿಸಿ ಚಾಲಕ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 11 ಗಂಟೆ ಸುಮಾರಿಗೆ ಯಲಹಂಕ ಮೇಲ್ಸೇತುವೆ ಮೇಲೆ ಅಪಘಾತ ಸಂಭವಿಸಿದೆ.
ಮೇಲ್ಸೇತುವೆ ಮೇಲೆ ಮೊದಲು ಕಾರ್ ಗೆ ಸಿಮೆಂಟ್ ಲಾರಿ ಡಿಕ್ಕಿ ಆಗಿದೆ. ಅಪಘಾತದ ವಿಚಾರವಾಗಿ ಬಲ ಭಾಗದಲ್ಲಿ ಕಾರ್ ಮತ್ತು ಲಾರಿ ಚಾಲಕನ ನಡುವೆ ಗಲಾಟೆ ನಡೆದಿದೆ. ಇದೇ ವೇಳೆ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಿಎಂಟಿಸಿ ಚಾಲಕ ಗಾಯಗೊಂಡಿದ್ದಾರೆ. ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಇಬ್ಬರ ಗುರುತು ಪತ್ತೆಯಾಗಿಲ್ಲ. ಮೃತರ ಸಂಬಂಧಿಕರ ಸಂಪರ್ಕಕ್ಕೆ ಯಲಹಂಕ ಠಾಣೆ ಪೋಲೀಸರು ಪ್ರಯತ್ನ ನಡೆಸಿದ್ದಾರೆ. ಅಪಘಾತದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ನಲ್ಲಿ ಓರ್ವ ಪ್ರಯಾಣಿಕ ಇದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಿಎಂಟಿಸಿ ಬಸ್, ಕಾರ್, ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comentarios