top of page

BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ

  • Writer: new waves technology
    new waves technology
  • Oct 25, 2024
  • 1 min read

ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ. ಮಹಿಳೆಯ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಪೊಲೀಸರಿಂದ ವರದಿ ಕೇಳಿದ್ದೇನೆ ಎಂದಿದ್ದಾರೆ.


ree









ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತನ್ನ 17 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದ 54 ವರ್ಷದ ಮಹಿಳೆ ಅನುಮಾನಾಸ್ಪದ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಆಗ್ರಹಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಡಾ ನಾಗಲಕ್ಷ್ಮಿ, ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ. ಮಹಿಳೆಯ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಪೊಲೀಸರಿಂದ ವರದಿ ಕೇಳಿದ್ದೇನೆ ಎಂದಿದ್ದಾರೆ. ಮಹಿಳೆ ಸಾವಿಗೆ ಎರಡು ದಿನಗಳ ಮೊದಲು, ಮಹಿಳೆ ಮತ್ತೊಂದು ದೂರಿನ ಸಂಬಂಧ ಚರ್ಚಿಸಲು ನನ್ನ ಕಚೇರಿಗೆ ಬಂದಿದ್ದರು. ಸಾಯಂಕಾಲದವರೆಗೂ ನನ್ನ ಜೊತೆಗಿದ್ದವಳಿಗೆ ಯಾವುದೇ ರೀತಿಯ ಅನಾರೋಗ್ಯ ಕಾಣಿಸಿರಲಿಲ್ಲ. ಆಕೆ ಕ್ಯಾನ್ಸರ್ ಬಗ್ಗೆ ಏನನ್ನೂ ಹೇಳಲಿಲ್ಲ. ಎರಡು ದಿನಗಳ ನಂತರ, ಅವಳು ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದಾಳೆಂದು ನನಗೆ ತಿಳಿಯಿತು.

ಸಾವಿಗೆ ನಿಖರ ಕಾರಣದ ಬಗ್ಗೆ ತನಿಖೆ ನಡೆಸುವಂತೆ ಆಕೆಯ ಸಂಬಂಧಿಕರು ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ಸಾವಿನ ಬಗ್ಗೆ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ನಾನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ, ಯಾರಿಗಾದರೂ ಕುಂದುಕೊರತೆಯೊಂದಿಗೆ ಬಂದವರಿಗೆ ನಾನು ಜವಾಬ್ದಾರನಾಗಿರುತ್ತೇನೆ. ಈ ಸಂಬಂಧ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ಆಗಸ್ಟ್ 27ರಂದು ಪತ್ರ ಬರೆಯಲಾಗಿತ್ತು.

Comments


bottom of page