top of page

Chaluvarayaswamy: ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ!? ಗಲಾಟೆ ಬಗ್ಗೆ ಸಚಿವರು ಹೇಳಿದ್ದಿಷ್ಟು!

  • Writer: new waves technology
    new waves technology
  • Nov 11, 2024
  • 1 min read

ರಾಮನಗರ:- ತಮ್ಮ ಮೇಲಿನ ಹಲ್ಲೆ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.











ವರ್ಗಾವಣೆ ಹಣ ಹಂಚಿಕೆ ಮಾಡುವ ವಿಚಾರಕ್ಕೆ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎಂದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ನಡುವೆ ಗಲಾಟೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದಕ್ಕೆ ಸ್ವತಃ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದು, ನಾನು ಎಂಗೇಜ್ಮೆಂಟ್ ಹೋಗಿದ್ದೆ. ಅಲ್ಲೇನು‌ ಗಲಾಟೆ ನಡೆದಿಲ್ಲ, ಜಯರಾಮ್ ಗೆ ನೀವು ಕೇಳಿ. ಅಂಥಾದ್ದೇನು ನಡೆದಿಲ್ಲ, ವರ್ಗಾವಣೆ ವಿಚಾರರ ಇಟ್ಟುಕೊಂಡು ಅವರು ಬಂದಿಲ್ಲ. ಚಪಲಕ್ಕೆ ಹೇಳುತ್ತಾರೋ ಗೊತ್ತಿಲ್ಲ ಎಂದು ಎಚ್​​ಡಿಕೆಗೆ ಟಾಂಗ್ ಕೊಟ್ಟರು.

ಅದೇನಾದ್ರೂ‌ ಇದ್ದರೆ ಕುಮಾರಸ್ವಾಮಿ ಹಾಕೋದಕ್ಕೆ‌ ಹೇಳಿ. ಚಪಲಕ್ಕೆ ಹೇಳ್ತಾರೋ‌ ಗೊತ್ತಿಲ್ಲ. ಸಿದ್ದಲಿಂಗೇಗೌಡ ದುಡ್ಡಿನ ವಿಚಾರ ಹೇಳೋದಕ್ಕೆ ಹೇಳಿ ಮೊದಲು. ಕುಮಾರಸ್ವಾಮಿ ತನ್ನ ಮಗನ ಚುನಾವಣೆ ನಿಲ್ಲಿಸಿದ್ರೂ ಚುನಾವಣೆ ಬಿಟ್ಟು ಚೆಲುವರಾಯಸ್ವಾಮಿ ಮೇಲೆ ಅವರ ಗಮನ. ಡಿಕೆ ಶಿವಕುಮಾರ್ ಹೇಳಿದಂಗೆ ಬೆಳಗೆದ್ದರೆ‌ ಮಲಗಿದ್ದರೆ ಮಾತಾಡದೇ ಹೋದ್ರೆ ನಿದ್ದೆ ಬರಲ್ಲ ಅಂದಂಗೆ ನನ್ನ ಹೆಸರು ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಕಿರಿಕಾರಿದರು.

Comentários


bottom of page