top of page

Champions Trophy 2025: ಮಳೆಯಿಂದ ಬಾಂಗ್ಲಾದೇಶ ವಿರುದ್ಧದ ಪಂದ್ಯ ರದ್ದು, ಪಾಕಿಸ್ತಾನಕ್ಕೆ ಮುಖಭಂಗ!

  • Writer: new waves technology
    new waves technology
  • Feb 27
  • 1 min read

ಬರೋಬ್ಬರಿ 29 ವರ್ಷಗಳ ಬಳಿಕ ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್ ಅನ್ನು ಆಯೋಜಿಸಿರುವ ಪಾಕಿಸ್ತಾನ, ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದೆ ತನ್ನ ಅಭಿಯಾನವನ್ನು ಕೊನೆಗೊಳಿಸಿದೆ.

ರಾವಲ್ಪಿಂಡಿ: ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಿಂದಲೇ ಹೊರಬಿದ್ದಿರುವ ಪಾಕಿಸ್ತಾನಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಗುರುವಾರ ಇಲ್ಲಿ ನಡೆಯಬೇಕಿದ್ದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದೆ.

ಬರೋಬ್ಬರಿ 29 ವರ್ಷಗಳ ಬಳಿಕ ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್ ಅನ್ನು ಆಯೋಜಿಸಿರುವ ಪಾಕಿಸ್ತಾನ, ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದೆ ತನ್ನ ಅಭಿಯಾನವನ್ನು ಕೊನೆಗೊಳಿಸಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳು ಆಡುತ್ತಿದ್ದು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ನ್ಯೂಜಿಲೆಂಡ್, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ತಂಡಗಳು ಎ ಗುಂಪಿಯನಲ್ಲಿದ್ದರೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಅಫ್ಗಾನಿಸ್ತಾನ ಬಿ ಗುಂಪಿನಲ್ಲಿ ಆಡುತ್ತಿವೆ.

ಮಳೆಯಿಂದಾಗಿ ಪಂದ್ಯ ರದ್ದಾಗಿರುವ ಕಾರಣ ಎ ಗುಂಪಿನಲ್ಲಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ.

ಬಾಂಗ್ಲಾದೇಶ ಕೂಡ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯದಲ್ಲಿ ಗೆಲುವು ಸಾಧಿಸದೆ ತಮ್ಮ ಪ್ರಯಾಣವನ್ನು ಕೊನೆಗೊಳಿಸಿದೆ. ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಥವಾ ಆತ್ಮಾವಲೋಕನ ಮಾಡಿಕೊಳ್ಳಲು ಸಾಕಷ್ಟು ಸಮಯದೊಂದಿಗೆ ತವರಿಗೆ ಮರಳಲಿದೆ.


ಪಂದ್ಯಾವಳಿಯಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪ್ರಮುಖವಾಗಿ, ದುಬೈನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಆರು ವಿಕೆಟ್‌ಗಳ ಸೋಲು ಕಂಡ ಪಾಕಿಸ್ತಾನದ ವಿರುದ್ಧ ಮಾಜಿ ಕ್ರಿಕೆಟಿಗರು ಕಿಡಿಕಾರುತ್ತಿದ್ದಾರೆ.

ರಾವಲ್ಪಿಂಡಿಯಲ್ಲಿ ಟಾಸ್ ಇಲ್ಲದೆಯೇ ಪಂದ್ಯವನ್ನು ರದ್ದು ಮಾಡಲಾಗಿದೆ. ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಕೂಡ ಮಳೆಯಿಂದ ರದ್ದಾಗಿತ್ತು. ಎ ಗುಂಪಿನಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ.

Comments


bottom of page