top of page

Dharmashala mass burial case: ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರನನ್ನು ಕರೆದೊಯ್ದ SIT; ಸ್ಪಾಟ್ 15 ರಲ್ಲಿ ತೀವ್ರ ಶೋಧ!

  • Writer: new waves technology
    new waves technology
  • Aug 8, 2025
  • 1 min read

ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು.

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರರನ್ನು ಕರೆದೊಯ್ದಿದೆ.

ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು.

ಹೊಸ ಸ್ಥಳದಲ್ಲಿ ಪರಿಶೀಲನೆ ಮತ್ತು ಭೂಮಿಯನ್ನು ಅಗೆಯುವ ಕಾರ್ಯವನ್ನು ಪ್ರಾರಂಭಿಸುವುದಾಗಿ ಎಸ್‌ಐಟಿಯ ಮೂಲಗಳು ತಿಳಿಸಿದ್ದವು.

ಪ್ರಕರಣದಲ್ಲಿ ಸಾಕ್ಷಿ-ದೂರುದಾರರು ತೋರಿಸಿರುವ ಒಟ್ಟು ಸ್ಥಳಗಳ ಪೈಕಿ ಈಗಾಗಲೇ 13 ಸ್ಥಳಗಳಲ್ಲಿ ಶೋಧ ಕಾರ್ಯ ಪೂರ್ಣಗೊಂಡಿದ್ದು, ಜುಲೈ 31 ರಂದು 6ನೇ ಸ್ಥಳದಲ್ಲಿ ಮಾತ್ರ ಮಾನವ ಅವಶೇಷಗಳು ಕಂಡುಬಂದಿವೆ. ಆಗಸ್ಟ್ 5 ರಂದು, ಎಸ್‌ಐಟಿ 11 ಮತ್ತು 12ನೇ ಸ್ಥಳದಲ್ಲಿ ಅಗೆದಿತ್ತು. ಆದರೆ, ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ.

ಅಲ್ಲದೆ, ಸಾಕ್ಷಿ-ದೂರುದಾರ ಗುರುತಿಸಿದ್ದ 13ನೇ ಜಾಗವನ್ನು ಹೊರತುಪಡಿಸಿ, ಉಳಿದೆಲ್ಲ ಸ್ಥಳಗಳಲ್ಲಿ ಎಸ್ಐಟಿ ಶೋಧ ಕಾರ್ಯ ಪೂರ್ಣಗೊಳಿಸಿದೆ. ಇದೀಗ 15ನೇ ಸ್ಥಳ ಎಂದು ಗುರುತಿಸಿದ ಹೊಸ ಸ್ಥಳದಲ್ಲಿಯೂ ಶೋಧಕ್ಕೆ ಮುಂದಾಗಿದೆ.

Comments


bottom of page