top of page

ED raids: ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಡಾ.ಜಿ. ಪರಮೇಶ್ವರ!

  • Writer: new waves technology
    new waves technology
  • May 22
  • 1 min read

ನಿಖರವಾದ ವಿವರಗಳು ತಿಳಿದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಚಿನ್ನದ ಕಳ್ಳಸಾಗಣೆ ದಂಧೆ ಸೇರಿದಂತೆ ಅಕ್ರಮ ಹಣಕಾಸು ವಹಿವಾಟು ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಬೆಂಗಳೂರು: ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಯುತ್ತಿರುವ ನಡುವೆಯೇ ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಿಖರವಾದ ವಿವರಗಳು ತಿಳಿದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಚಿನ್ನದ ಕಳ್ಳಸಾಗಣೆ ದಂಧೆ ಸೇರಿದಂತೆ ಅಕ್ರಮ ಹಣಕಾಸು ವಹಿವಾಟು ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಚಿನ್ನ ಕಳ್ಳ ಸಾಗಣೆ ಆರೋಪಿ, ನಟಿ ರನ್ಯಾರಾವ್ ಖಾತೆಗೆ ಹವಾಲಾ ಹಣ ವರ್ಗಾವಣೆ ಮಾಡಿದವರನ್ನು ಗುರಿಯಾಗಿಸಿಕೊಂಡು ED ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ಪರಮೇಶ್ವರ ಅವರಿಗೆ ಸಂಬಂಧಿಸಿದ ಮೂರು ಶಿಕ್ಷಣ ಸಂಸ್ಥೆಗಳೂ ಸೇರಿವೆ.

ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಸೇರಿದಂತೆ ಮೂರು ಸಂಸ್ಥೆಗಳಿಗೆ ED ಅಧಿಕಾರಿಗಳು ಭೇಟಿ ನೀಡಿದ್ದು, ಕಳೆದ ಐದು ವರ್ಷಗಳ ಆರ್ಥಿಕ ದಾಖಲೆಗಳನ್ನು ಕೋರಿದ್ದಾರೆ ಎಂದು ಪರಮೇಶ್ವರ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರು ದಾಳಿಯ ನಂತರ ಪರಮೇಶ್ವರ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

"ನಾವೆಲ್ಲರೂ ಸಾರ್ವಜನಿಕ ಜೀವನದಲ್ಲಿ ಇದ್ದೇವೆ. ಅನೇಕ ಜನರು ಟ್ರಸ್ಟ್‌ಗಳನ್ನು ನಡೆಸುತ್ತಿದ್ದು, ಅವರು ಮದುವೆಗೆ ಹಣವನ್ನು ಉಡುಗೊರೆಯಾಗಿ ನೀಡಿರಬಹುದು. ಪರಮೇಶ್ವರ ಅವರಂತಹ ಪ್ರಭಾವಿ ನಾಯಕ ಕಳ್ಳಸಾಗಣೆಯಲ್ಲಿ ತೊಡಗಬಹುದೇ?" ಎಂದು ಶಿವಕುಮಾರ್ ಪ್ರಶ್ನಿಸಿದರು.

ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬಂದ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದು 14.2 ಕೆಜಿ ತೂಕದ 12.56 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು.


Comments


bottom of page