top of page

ICC Champions Trophy: ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ- MEA ಸ್ಪಷ್ಟನೆ

  • Writer: new waves technology
    new waves technology
  • Nov 29, 2024
  • 1 min read

ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಗೆ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಹೋಗುವ ವಿಚಾರವಾಗಿ ಕೇಂದ್ರ ವಿದೇಶಾಂಗ ಇಲಾಖೆ ಇಂದು ಸ್ಪಷ್ಟನೆ ನೀಡಿದೆ.

ree









ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಪುರುಷರ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ಇಲಾಖೆ ಶುಕ್ರವಾರ ಸ್ಪಷ್ಟಪಡಿಸಿದೆ.

ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಗೆ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಹೋಗುವ ವಿಚಾರವಾಗಿ ಕೇಂದ್ರ ವಿದೇಶಾಂಗ ಇಲಾಖೆ ಇಂದು ಸ್ಪಷ್ಟನೆ ನೀಡಿದ್ದು, ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್, 'ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ. ಭದ್ರತಾ ಕಾಳಜಿಯ ದೃಷ್ಟಿಯಿಂದ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಈಗಾಗಲೇ ನಾವು ಬಿಸಿಸಿಐಗೆ ಮಾಹಿತಿ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ.


ಭಾರತ ನಿರ್ಧಾರದ ಬೆನ್ನಲ್ಲೇ ಐಸಿಸಿ ಮಹತ್ವದ ಸಭೆ

ಇನ್ನು ಭಾರತ ತಂಡದ ನಿರ್ಧಾರ ಹೊರ ಬೀಳುತ್ತಿದ್ದಂತೆಯೇ ಅತ್ತ ಐಸಿಸಿ ಕೂಡ ಟೂರ್ನಿ ಕುರಿತು ನಿರ್ಣಯ ಕೈಗೊಳ್ಳಲು ಮಹತ್ವದ ಸಭೆ ನಡೆಸಿದೆ. ಐಸಿಸಿ ಇಂದು ವರ್ಚುವಲ್ ಸಭೆ ನಡೆಸುತ್ತಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹಗ್ಗಜಗ್ಗಾಟಕ್ಕೆ ತೆರೆ ಎಳೆಯುವ ಸಲುವಾಗಿ ಐಸಿಸಿ ಈ ಸಭೆಯನ್ನು ಏರ್ಪಡಿಸಿದೆ ಎನ್ನಲಾಗಿದೆ.

ಈಗಾಗಲೇ ಐಸಿಸಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಪಾಕಿಸ್ತಾನಕ್ಕೆ ಕೇಳಿದೆಯಾದರೂ ಇದಕ್ಕೆ ಪಿಸಿಬಿ ಒಪ್ಪಿಲ್ಲ. ಐಸಿಸಿ ಸಂಧಾನದ ಪ್ರಕಾರ ಭಾರತದ ಪಂದ್ಯಗಳು ಪಾಕಿಸ್ತಾನದ ಹೊರಗೆ ನಡೆಯಲಿದ್ದು, ಉಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ನಡೆಯಲಿವೆ ಎನ್ನಲಾಗಿದೆ. ಆದರೆ ಪಾಕಿಸ್ತಾನ ಈಗಾಗಲೇ ಹೈಬ್ರಿಡ್ ಮಾದರಿಗೆ ನಮ್ಮ ಸಮ್ಮತಿಯಿಲ್ಲ ಎಂಬುದನ್ನು ಐಸಿಸಿಗೆ ತಿಳಿಸಿದೆ. ಹೀಗಾಗಿ ಐಸಿಸಿಯ ಈ ನಿರ್ಧಾರಕ್ಕೆ ಪಾಕಿಸ್ತಾನ ಒಪ್ಪದಿದ್ದರೆ, ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದ ಹೊರಗೆ ನಡೆಸುವ ಸಾಧ್ಯತೆಗಳಿವೆ.

Comments


bottom of page